2026ರ ಪದ್ಮ ಪ್ರಶಸ್ತಿ| ನಟ ಧರ್ಮೇಂದ್ರ, ಹರ್ಮನ್ ಪ್ರೀತ್ ಕೌರ್ಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

Photo| PTI/x
ಹೊಸದಿಲ್ಲಿ: ಸಿನಿಮಾ, ಕ್ರೀಡೆ, ಸಾರ್ವಜನಿಕ ವ್ಯವಹಾರ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅವರ ಪತ್ನಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪಿಟೀಲು ವಾದಕ ಎನ್ ರಾಜಮ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ, ಮಹಾರಾಷ್ಟ್ರದ ಮಾಜಿ ಗವರ್ನರ್ ಭಗತ್ ಸಿಂಗ್ ಕೋಶ್ಯಾರಿ ಮತ್ತು ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರದಾನ ಮಾಡಿದರು.
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರವು 5 ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಸೇರಿದಂತೆ 131 ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿತ್ತು.
Next Story




