ಕೊಯಮತ್ತೂರು | ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರು ಆರೋಪಿಗಳ ಬಂಧನ

Photo | thehindu
ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳವಾರ ಮುಂಜಾನೆ ಪೊಲೀಸರು ಕಾಲಿಗೆ ಗುಂಡಿಕ್ಕಿ ಆರೋಪಿಗಳಾದ ತವಾಸಿ, ಕಾರ್ತಿಕ್ ಮತ್ತು ಕಾಳೀಶ್ವರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಯಮತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ತನ್ನ ಗೆಳೆಯರೊಂದಿಗೆ ಕಾರಿನಲ್ಲಿದ್ದಾಗ ಆಕೆಯನ್ನು ಅಪಹರಿಸಿದ ಆರೋಪಿಗಳು ಬಲವಂತವಾಗಿ ಆಕೆಯನ್ನು ಬೇರೆ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು 7 ವಿಶೇಷ ತಂಡಗಳನ್ನು ರಚಿಸಲಾಗಿತ್ತು.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಘಟನೆಯು ತಮಿಳುನಾಡಿನಲ್ಲಿ ರಾಜಕೀಯ ತಿರುವು ಪಡೆದುಕೊಂಡಿತ್ತು. ಕಾನೂನು ಸುವ್ಯವಸ್ಥೆ ಮತ್ತು ಮಹಿಳೆಯರ ಸುರಕ್ಷತೆ ವಿಷಯದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರಕಾರವನ್ನು ಪ್ರತಿಪಕ್ಷಗಳು ಗುರಿಯಾಗಿಸಿಕೊಂಡಿದ್ದವು.





