Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ 31% ಭಾಗದಲ್ಲಿ ಅನಾವೃಷ್ಟಿ ಭೀತಿ;...

ದೇಶದ 31% ಭಾಗದಲ್ಲಿ ಅನಾವೃಷ್ಟಿ ಭೀತಿ; ಮುಂದಿನ ಎರಡು ವಾರ ನಿರ್ಣಾಯಕ

ವಾರ್ತಾಭಾರತಿವಾರ್ತಾಭಾರತಿ26 Aug 2023 9:14 AM IST
share
ದೇಶದ 31% ಭಾಗದಲ್ಲಿ ಅನಾವೃಷ್ಟಿ ಭೀತಿ; ಮುಂದಿನ ಎರಡು ವಾರ ನಿರ್ಣಾಯಕ

ಪುಣೆ: ದೇಶದ ಶೇಕಡ 31ರಷ್ಟು ಭೂಭಾಗ ಅನಾವೃಷ್ಟಿಯ ಭೀತಿ ಎದುರಿಸುತ್ತಿದ್ದು, ಸಾಮಾನ್ಯದಿಂದ ಭಾರೀ ವೈಪರೀತ್ಯ ಸ್ಥಿತಿ ಈ ಭಾಗದಲ್ಲಿ ಬಂದಿದೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಜುಲೈ 27 ರಿಂದ ಆಗಸ್ಟ್ 23ರ ಅವಧಿಯ ಸ್ಟಾಂಡರ್ಡೈಸ್ಡ್ ಪ್ರಿಸಿಪಿಟೇಶನ್ ಇಂಡೆಕ್ಸ್ (ಎಸ್‍ಪಿಐ) ಅಂಕಿ ಅಂಶಗಳಿಂದ ಇದು ದೃಢಪಟ್ಟಿದೆ. ಇದು ಕೃಷಿ, ಬೆಳೆಯ ಇಳುವರಿ ಮತ್ತು ಮಣ್ಣಿನ ತೇವಾಂಶದ ಮೇಲೆ ಮಹತ್ವದ ಪರಿಣಾಮ ಬೀರಲಿದೆ.

ವಿಶ್ವ ಹವಾಮಾನ ಸಂಸ್ಥೆಯ ತಜ್ಞರ ತಂಡ ಹವಾಮಾನ ಸೂಚ್ಯಂಕಗಳನ್ನು ತಿಳಿಯಲು ಅಭಿವೃದ್ಧಿಪಡಿಸಿದ ಎಸ್‍ಪಿಐ ಮಾನದಂಡ, ವಿವಿಧ ಕಾಲಘಟ್ಟಗಳಲ್ಲಿ ಬರ ಪರಿಸ್ಥಿತಿಯನ್ನು ಬಿಂಬಿಸುತ್ತದೆ. ಭಾರತದ ಹವಾಮಾನ ಇಲಾಖೆ "ಬರ ಪರಿಸ್ಥಿತಿ" ಎಂಬ ಶಬ್ದವನ್ನು ಕೈಬಿಟ್ಟು, "ಮಳೆ ಅಭಾವ" ಎಂಬ ಪದವನ್ನು ಬಳಸಿದೆ. ಕಳೆದ ಒಂದು ತಿಂಗಳಿಂದ ಮಂಗಾರು ದುರ್ಬಲವಾಗಿಯೇ ಉಳಿದಿದ್ದು, ಆಗಸ್ಟ್ ತಿಂಗಳಲ್ಲಿ ಇದುವರೆಗಿನ ಕನಿಷ್ಠ ಮಳೆ ದಾಖಲಾಗಿದೆ. ಭಾರತದ ಭೂಭಾಗದ ಶೇಕಡ 31ರಷ್ಟು ಪ್ರದೇಶಗಳಲ್ಲಿ ಶೇಕಡ 9ರಷ್ಟು ಮಳೆ ಅಭಾವ ಇದ್ದು, ಉಳಿಕೆ ಶೇಕಡ 4ರಷ್ಟು ಪ್ರದೇಶಗಳಲ್ಲಿ ತೀವ್ರ ಶುಷ್ಕ ವಾತಾವರಣ ಇದೆ.

ಇಂಥ ವೈಪರೀತ್ಯದ ಪರಿಸ್ಥಿತಿ ಇರುವ ಪ್ರದೇಶಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳು, ಮಹಾರಾಷ್ಟ್ರದ ಜಿಲ್ಲೆಗಳು, ಗುಜರಾತ್ ಹಾಗೂ ಪೂರ್ವಭಾರತ ಸೇರಿದೆ. ಈ ಭಾಗಗಳಲ್ಲಿ ಪರಿಸ್ಥಿತಿ ತೀರಾ ಕಠಿಣವಾಗಿದೆ ಎನ್ನುವುದನ್ನು ಎಸ್‍ಪಿಐ ಅಂಕಿ ಅಂಶಗಳು ದೃಢಪಡಿಸಿದ್ದು, ಸಾಮಾನ್ಯದಿಂದ ಭಾರೀ ಶುಷ್ಕ ವಾತಾವರಣ ಇದೆ ಎಂದು ಸ್ಪಷ್ಟಪಡಿಸಿದೆ.

ಈ ಅಂಕಿ ಅಂಶಗಳ ಪ್ರಕಾರ ಭಾರತದ ಶೇಕಡ 47ರಷ್ಟು ಭೂಭಾಗಗಳಲ್ಲಿ ಸಾಮಾನ್ಯ ಶುಷ್ಕ ಸ್ಥಿತಿ ಇದೆ. ಈ ಪರಿಸ್ಥಿತಿ ಮಣ್ಣಿನಲ್ಲಿ ತೇವಾಂಶದ ಕೊರತೆಗೆ ಕಾರಣವಾಗಲಿದ್ದು, ಇದು ಬೆಳೆಯ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಹಾಗೂ ಉತ್ಪಾದಕತೆಗೆ ಧಕ್ಕೆ ತರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮುಂದಿನ ಎರಡು ವಾರಗಳು ಅತ್ಯಂತ ಮಹತ್ವದ ಅವಧಿಯಾಗಿದ್ದು, ಮಳೆ ಅಭಾವ ಸ್ಥಿತಿ ಮುಂದುವರಿದರೆ, ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಐಎಂಡಿ ವಿಜ್ಞಾನಿ ರಜೀಬ್ ಚಟ್ಟೋಪಾಧ್ಯಾಯ ಹೇಳಿದ್ದಾರೆ.

Tags

newdelhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X