ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿನ ಲಿಫ್ಟ್ ಕುಸಿತ; 4 ಮಂದಿ ಮೃತ್ಯು

Photo credit: indiatoday.in
ನೊಯ್ಡ(ಉ.ಪ್ರ): ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿಯ ಲಿಫ್ಟ್ ಕುಸಿದು ಬಿದ್ದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಗ್ರೇಟರ್ ನೊಯ್ಡಾದಲ್ಲಿ ಸಂಭವಿಸಿದೆ. ಇತರ ಐವರು ಕಾರ್ಮಿಕರು ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಆಮ್ರಪಾಲಿ ಡ್ರೀಮ್ ವ್ಯಾಲಿ ಹೌಸಿಂಗ್ ಸೊಸೈಟಿಯ ಕಟ್ಟಡ ನಿರ್ಮಾಣ ತಾಣದಲ್ಲಿ ಈ ದುರಂತ ಸಂಭವಿಸಿದೆ.
ಮೃತರು ಮತ್ತು ಗಾಯಾಳುಗಳು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರಾಗಿದ್ದಾರೆ.
Next Story





