ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ 5.1 ತೀವ್ರತೆಯ ಭೂಕಂಪನ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ. ಮಂಜಾನೆ 4 ಗಂಟೆ 17 ನಿಮಿಷಕ್ಕೆ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರಬಿಂದು 50 ಕಿಲೋಮೀಟರ್ ಆಳದಲ್ಲಿತ್ತು. 26.37 ಡಿಗ್ರಿ ಉತ್ತರ ಅಕ್ಷಾಂಶ ಹಾಗೂ 92.29 ಡಿಗ್ರಿ ಪೂರ್ವ ರೇಖಾಂಶದಲ್ಲಿ ಕೇಂದ್ರ ಬಿಂದು ಇತ್ತು ಎಂದು ಎನ್ಸಿಎಸ್ ಸ್ಪಷ್ಟಪಡಿಸಿದೆ.
ಯಾವುದೇ ಸಾವು ನೋವು ಅಥವಾ ಆಸ್ತಿ ಪಾಸ್ತಿಗಳಿಗೆ ಹಾನಿಯಾದ ವಿವರಗಳು ತಕ್ಷಣಕ್ಕೆ ಲಭ್ಯವಿಲ್ಲ. ಕೇಂದ್ರ ಅಸ್ಸಾಂನಲ್ಲಿ ಕೂಡಾ ನಿವಾಸಿಗಳಿಗೂ ಅಲ್ಪ ಅಥವಾ ಸಾಮಾನ್ಯ ಪ್ರಮಾಣದ ಕಂಪನದ ಅನುಭವವಾಗಿದೆ ಎಂದು ಮೂಲಗಳು ಹೇಳಿವೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.
Next Story





