ರಾಜಸ್ಥಾನ | ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತ್ಯು

Photo | NDTV
ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
25 ರಿಂದ 30 ವರ್ಷ ವಯಸ್ಸಿನ 11 ಮಂದಿ ಯುವಕರು ಸ್ನಾನ ಮಾಡಲು ಬನಾಸ್ ನದಿಗೆ ಇಳಿದಿದ್ದರು. ಇದೇ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟೊಂಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಂಗ್ವಾನ್ ತಿಳಿಸಿದ್ದಾರೆ.
ʼರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಬನಾಸ್ ನದಿಯಲ್ಲಿ ಮುಳುಗಿ 8 ಮಂದಿ ಪ್ರವಾಸಿಗರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ದುಃಖಿತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ದಾರೆ.