ಪರೀಕ್ಷೆ ಬರೆದ ಕೆಲವೇ ತಾಸುಗಳ ಬಳಿಕ ಮಗುವಿಗೆ ಜನ್ಮ ನೀಡಿದ 16ರ ಬಾಲಕಿ!

ಸಾಂದರ್ಭಿಕ ಚಿತ್ರ | Photo Credit : freepik
ಹೈದರಾಬಾದ್: ತೆಲಂಗಾಣದ ನಾಗರಕರ್ನೂಲ್ನಲ್ಲಿ 16 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ಕೆಲವೇ ತಾಸುಗಳ ಬಳಿಕ ಮಗುವೊಂದನ್ನು ಪ್ರಸವಿಸಿದ್ದಾಳೆ ಎಂದು ವರದಿಯಾಗಿದೆ.
11ನೇ ತರಗತಿಯ ಈ ವಿದ್ಯಾರ್ಥಿನಿ, ಬಾಲಕಿಯರ ವಸತಿಶಾಲೆಯೊಂದರಲ್ಲಿ ಕಲಿಯುತ್ತಿದ್ದಳು.
ಸೋಮವಾರ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ, ತೀವ್ರ ಹೊಟ್ಟೆನೋವಿನಿಂದ ನರಳುತ್ತಿದ್ದರು. ಆನಂತರ ಆಕೆಯನ್ನು ನಾಗರಕರ್ನೂಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಸ್ಕ್ಯಾನಿಂಗ್ ಪರೀಕ್ಷೆಗಾಗಿ ಕಾಯುತ್ತಿದ್ದಾಗ, ವಾಶ್ರೂಮಿಗೆ ತೆರಳಿದ ಬಾಲಕಿಗೆ ಹಠಾತ್ತನೇ ಪ್ರಸವವೇದನೆಯುಂಟಾಗಿ, ಶಿಶುವಿಗೆ ಜನ್ಮ ನೀಡಿದ್ದಳು.
ವಾಶ್ರೂಮ್ನಲ್ಲಿ ನವಜಾತಶಿಶು ಇರುವುದನ್ನು ಕಂಡ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಲಕಿ ಹಾಗೂ ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಬಾಲಕಿಯ ಗರ್ಭಧಾರಣೆಗೆ ಕಾರಣನಾದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಪೊಕ್ಸೊ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಬೇಕೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.







