Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಭಿವೃದ್ಧಿಗಾಗಿ ದೇಶದಲ್ಲಿ ಬಿಜೆಪಿಯೇತರ...

ಅಭಿವೃದ್ಧಿಗಾಗಿ ದೇಶದಲ್ಲಿ ಬಿಜೆಪಿಯೇತರ ಸರಕಾರ ಬರಲೇಬೇಕು: ಸಾಂಗ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಮೋದಿ ಜನಪ್ರಿಯತೆ ಮಸುಕಾಗುತ್ತಿದೆ’

ವಾರ್ತಾಭಾರತಿವಾರ್ತಾಭಾರತಿ25 Jun 2023 8:08 PM IST
share
ಅಭಿವೃದ್ಧಿಗಾಗಿ ದೇಶದಲ್ಲಿ ಬಿಜೆಪಿಯೇತರ ಸರಕಾರ ಬರಲೇಬೇಕು: ಸಾಂಗ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು/ಮಹಾರಾಷ್ಟ್ರ, ಜೂ.25: ‘ದೀನದಲಿತರು ಹಾಗೂ ಬಡವರ ಏಳಿಗೆ, ಭ್ರಷ್ಟಾಚಾರ ನಿಗ್ರಹ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸಲು ದೇಶದಲ್ಲಿ ಬಿಜೆಪಿಯೇತರ ಸರಕಾರ ಬರಲೇಬೇಕು. ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ ಲೊಕಸಭೆ ಚುನಾವಣೆಯನ್ನು ಗೆಲ್ಲಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ರವಿವಾರ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕಾಂಗ್ರೆಸ್ ಪಕ್ಷದ ‘ಮಹಾ ನಿರ್ಧಾರ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ‘40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ. ಅವರ ‘ಅಚ್ಛೇ ದಿನ್ ಆಯೆಂಗೆ’ ಎಂಬ ಮಾತು ಹೇಳಿದ್ದರು. ಆದರೆ, ಆ ಮಾತು ಏನಾಯಿತು’ ಎಂದು ಪ್ರಶ್ನಿಸಿದರು.

ಹೋರಾಟಕ್ಕೆ ಸಿದ್ಧರಾಗಬೇಕು: ‘ಸಾಂಗ್ಲಿ ಜಿಲ್ಲೆ ಕಾಂಗ್ರೆಸ್‍ನ ಭದ್ರ ಕೋಟೆ. ರಾಷ್ಟ್ರನಾಯಕರನ್ನು ದೇಶಕ್ಕೆ ನೀಡಿದೆ. ಅಂಬೇಡ್ಕರ್ ಅವರು ಸಂವಿಧಾನದ ಕರ್ತೃ. ಸಂವಿಧಾನವಿರದಿದ್ದರೆ ಸಮಾಜದ ಶೋಷಿತರು, ದೀನ ದಲಿತರು, ಅಲ್ಪಸಂಖ್ಯಾತರೂ ದೇಶದ ರಾಜಕಾರಣದಲ್ಲಿ, ಸಾಮಾಜಿಕ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯಬಹುದು. ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್‍ನವರು ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಸಲಹೆ ಮಾಡಿದರು.

‘ಕೋಮುವಾದಿ ಬಿಜೆಪಿ ಸಂವಿಧಾನವನ್ನು ವಿರೋಧಿಸುತ್ತದೆ. ಸಾವರ್ಕರ್, ಗೋಲ್ವಾಲ್ಕರ್ ಸಂವಿಧಾನವನ್ನು ಅಂದೇ ವಿರೋಧಿಸಿದ್ದರು. ಧರ್ಮಗಳ ನಡುವೆ ಸಂಘರ್ಷಗಳಿಂದ ದೀನದಲಿತರು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ. ಹೀಗಾಗಿ ಬಿಜೆಪಿ ಕಿತ್ತೊಗೆಯಬೇಕಾದ ಜವಾಬ್ದಾರಿ ಕಾಂಗ್ರೆಸ್‍ನ ಮೇಲಿದೆ. ಪ್ರಜಾತಂತ್ರದ ರಕ್ಷಣೆಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ನಾವೆಲ್ಲರೂ ಸನ್ನದ್ಧರಾಗಬೇಕು ಎಂದು ಹೇಳಿದರು.

ಮೋದಿ ಜನಪ್ರಿಯತೆ ಮಸುಕು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಧಾನಿ ಮೋದಿ ಹಾಗೂ ಕೇಂದ್ರದ ಅನೇಕ ಸಚಿವರು ರಾಜ್ಯಕ್ಕೆ ಭೇಟಿ ನೀಡಿದರು. ಆದರೂ ಕರ್ನಾಟಕದಲ್ಲಿ ಬಿಜೆಪಿ ಸೋತಿರುವುದು ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ ಎಂಬುದರ ಸಂಕೇತ. ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ, ಜನ ವಿರೋಧಿಯಾಗಿತ್ತು. ಕೇವಲ ಪ್ರಧಾನಿ ಮೋದಿಯವರನ್ನು ನಂಬಿ ಚುನಾವಣೆ ಗೆಲ್ಲಬಹುದೆಂಬ ಬಿಜೆಪಿ ನಂಬಿಕೆ ಹುಸಿಯಾಯಿತು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಮಾವೇಶದಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಶಾಸಕಾಂಗ ಪಕ್ಷದ ನಾಯಕ ಬಾಳಾ ಸಾಹೇಬ್ ತೋರತ್, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಶಾಸಕರಾದ ವಿಕ್ರಂ ಸಾವಂತ್, ವಿಶ್ವಜಿತ್ ಕದಂ ಸೇರಿದಂತೆ ಇನ್ನಿತರ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X