Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಸೂರ್ಯನ ಅಧ್ಯಯನಕ್ಕಾಗಿ ಬಾಹ್ಯಾಕಾಶ...

ಇನ್ನು ಸೂರ್ಯನ ಅಧ್ಯಯನಕ್ಕಾಗಿ ಬಾಹ್ಯಾಕಾಶ ವೀಕ್ಷಣಾಲಯ; ಸೆ. 2ರಂದು ‘ಆದಿತ್ಯ- ಎಲ್‌1’ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ28 Aug 2023 9:37 PM IST
share
ಇನ್ನು ಸೂರ್ಯನ ಅಧ್ಯಯನಕ್ಕಾಗಿ ಬಾಹ್ಯಾಕಾಶ ವೀಕ್ಷಣಾಲಯ; ಸೆ. 2ರಂದು ‘ಆದಿತ್ಯ- ಎಲ್‌1’ ಉಡಾವಣೆ

ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಮೊದಲ ಬಾಹ್ಯಾಕಾಶ ಸೌರ ವೀಕ್ಷಣಾಲಯ ‘ಆದಿತ್ಯ- ಎಲ್‌1’ನ್ನು ಸೆಪ್ಟಂಬರ್ 2ರಂದು ಉಡಾಯಿಸಲಿದೆ.

‘ಆದಿತ್ಯ- ಎಲ್‌1’ ಬಾಹ್ಯಾಕಾಶ ನೌಕೆಯು ಸೆಪ್ಟಂಬರ್ 2ರಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆಕಾಶಕ್ಕೆ ಚಿಮ್ಮಲಿದೆ.

‘ಆದಿತ್ಯ- ಎಲ್‌1’ ಸೂರ್ಯನ ಅಧ್ಯಯನಕ್ಕೆ ಮೀಸಲಾಗಿರುವ ಭಾರತದ ಮೊದಲ ಯೋಜನೆಯಾಗಿದ್ದು ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಇಸ್ರೋದ ಬಾಹ್ಯಾಕಾಶ ವೀಕ್ಷಣಾಲಯವನ್ನು ಸೂರ್ಯ-ಭೂಮಿ ಮಂಡಲದ ಲಗ್ರಾಂಜ್ ಪಾಯಿಂಟ್ 1 (ಎಲ್‌1)ನ ಸುತ್ತಲಿರುವ ಕಕ್ಷೆಯಲ್ಲಿ, ಅಂದರೆ ಭೂಮಿಯ ಮೇಲ್ಮೈಯಿಂದ ಸುಮಾರು 15 ಲಕ್ಷ ಕಿಲೋಮೀಟರ್ ದೂರದಲ್ಲಿ ಇರಿಸಲಾಗುವುದು. ಗ್ರಹಣಗಳೇ ಇರಲಿ, ಯಾವುದೇ ಆಕಾಶಕಾಯ ಭೂಮಿ ಮತ್ತು ಸೂರ್ಯನ ನಡುವೆ ಹಾದು ಹೋಗುತ್ತಿರಲಿ, ಈ ಸ್ಥಳದಿಂದ ಸೂರ್ಯನನ್ನು ನಿರಂತರವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ.

ವಿವಿಧ ಸೌರ ಚಟುವಟಿಕೆಗಳು ಮತ್ತು ಬಾಹ್ಯಾಕಾಶ ವಾತಾವರಣದ ಮೇಲೆ ಅವು ಬೀರುವ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡುವ ಉದ್ದೇಶವನ್ನು ಯೋಜನೆ ಹೊಂದಿದೆ. ಈ ವೀಕ್ಷಣಾಲಯದಲ್ಲಿ ಏಳು ಉಪಕರಣಗಳಿದ್ದು, ಫೋಟೊಸ್ಪೀಯರ್, ಕ್ರೋಮೋಸ್ಪಿಯರ್ ಮತ್ತು ಸೂರ್ಯನ ಅತ್ಯಂತ ಹೊರಗಿನ ಪದರವಾಗಿರುವ ಕೊರೋನವನ್ನು ವಿವಿಧ ತರಂಗಾಂತರಗಳಿಂದ ವೀಕ್ಷಿಸಲು ಸಾಧ್ಯವಾಗುತ್ತದೆ. ಇವುಗಳ ಪೈಕಿ ನಾಲ್ಕು ಉಪಕರಣಗಳು ಸೂರ್ಯನನ್ನು ನೇರವಾಗಿ ವೀಕ್ಷಿಸುತ್ತದೆ ಹಾಗೂ ಉಳಿದ ಮೂರು ಉಪಕರಣಗಳು ಎಲ್‌1 ಪಾಯಿಂಟ್‌ನಲ್ಲಿರುವ ಕಣಗಳು ಮತ್ತು ಕ್ಷೇತ್ರಗಳನ್ನು ಅಧ್ಯಯನ ಮಾಡುತ್ತವೆ.

ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಪೋಲಾರ್ ಸೆಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ-ಎಕ್ಸ್‌ಎಲ್) ರಾಕೆಟ್ ಮೂಲಕ ಉಡಾಯಿಸಲಾಗುತ್ತದೆ. ಬಾಹ್ಯಾಕಾಶ ನೌಕೆಯು ಈಗಾಗಲೇ ಶ್ರೀಹರಿಕೋಟ ತಲುಪಿದೆ ಹಾಗೂ ಬಾಹ್ಯಾಕಾಶ ಯಾತ್ರೆಗೆ ಸಿದ್ಧವಾಗಿದೆ.

ಪ್ರಮುಖ ಉದ್ದೇಶಗಳು:

ಸೌರ ಗಾಳಿ ಮತ್ತು ಬಾಹ್ಯಾಕಾಶ ಹವಾಮಾನದ ರಚನೆ ಮತ್ತು ಸಂಯೋಜನೆ, ಅದರ ಹಿಂದಿನ ಕಾರಣಗಳನ್ನು ಅಧ್ಯಯನ ಮಾಡುವುದು, ಕೊರೋನಲ್ ಮಾಸ್ ಇಜೆಕ್ಷನ್ (ಸಿಎಮ್‌ಇ)ಗಳ ಪ್ರಕ್ರಿಯೆಯನ್ನು ಅರಿತುಕೊಳ್ಳುವುದು ಮತ್ತು ಸೌರ ಬಿಂಬವನ್ನು ವೀಕ್ಷಿಸುವುದು ಈ ಯೋಜನೆಯ ವೈಜ್ಞಾನಿಕ ಉದ್ದೇಶಗಳ ಪೈಕಿ ಕೆಲವು.

ಸೂರ್ಯನ ಹೊರ ವಾತಾವರಣವು ಬಿಸಿಯಾಗುವ ರೀತಿ ಹಾಗೂ ಭೂಮಿಯ ವಾತಾವರಣ ಮತ್ತು ಜಾಗತಿಕ ಹವಾಮಾನದ ಮೇಲೆ ಸೂರ್ಯನ ವಿಕಿರಣದ ಪರಿಣಾಮ ಮುಂತಾದ ಸೌರ ಭೌತಶಾಸ್ತ್ರದ ಬಗೆಹರಿಯದ ವಿಷಯಗಳ ಮೇಲೆಯೂ ಈ ಯೋಜನೆ ಗಮನ ಹರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X