Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಟ್ಸ್‌ಆ್ಯಪ್ ಬಳಿಕ ಟೆಲಿಗ್ರಾಮ್,...

ವಾಟ್ಸ್‌ಆ್ಯಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್‌ಗೂ ಕೇಂದ್ರದ ನೋಟಿಸ್‌

ವಾರ್ತಾಭಾರತಿವಾರ್ತಾಭಾರತಿ3 July 2026 7:58 AM IST
share
ವಾಟ್ಸ್‌ಆ್ಯಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್‌ಗೂ ಕೇಂದ್ರದ ನೋಟಿಸ್‌

ಹೊಸದಿಲ್ಲಿ: ವಾಟ್ಸಾಪ್‌ ನ ಪ್ರಸ್ತಾವಿತ 'ಯೂಸರ್‌ನೇಮ್' (ಬಳಕೆದಾರಹೆಸರು) ವೈಶಿಷ್ಟ್ಯದ ಜಾರಿಗೆ ತಾತ್ಕಾಲಿಕ ವಿರಾಮ ನೀಡುವಂತೆ ಮೆಟಾ ಸಂಸ್ಥೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ ಒಂದು ದಿನದ ಬಳಿಕ, ಟೆಲಿಗ್ರಾಮ್ ಮತ್ತು ಸಿಗ್ನಲ್ ಸಂಸ್ಥೆಗಳಿಗೂ ಅವುಗಳ ಈಗಿರುವ ಬಳಕೆದಾರಹೆಸರು ವ್ಯವಸ್ಥೆಗಳ ಕುರಿತು ನೋಟಿಸ್‌ ಜಾರಿಗೊಳಿಸಿದೆ.

ವಂಚನೆ, ಫಿಶಿಂಗ್‌, ಡಿಜಿಟಲ್ ಬಂಧನ ವಂಚನೆ ಹಾಗೂ ಗುರುತಿನ ಅನುಕರಣೆ (ಇಂಪರ್ಸನೇಷನ್‌) ಪ್ರಕರಣಗಳನ್ನು ತಡೆಯಲು ಈ ವೇದಿಕೆಗಳು ಯಾವ ಕ್ರಮಗಳನ್ನು ಕೈಗೊಂಡಿವೆ ಎಂಬ ಬಗ್ಗೆ ವಿವರ ನೀಡುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಟೆಲಿಗ್ರಾಮ್ ಮತ್ತು ಸಿಗ್ನಲ್ ಸಂಸ್ಥೆಗಳಿಗೆ ಉತ್ತರ ನೀಡಲು ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ.

ಟೆಲಿಗ್ರಾಮ್‌ಗೆ ಕಳುಹಿಸಿರುವ ನೋಟಿಸ್‌ನಲ್ಲಿ, ಬಳಕೆದಾರಹೆಸರು ವೈಶಿಷ್ಟ್ಯವನ್ನು ಮುಂದುವರಿಸಲು ಅವಕಾಶ ನೀಡಬೇಕಾದ ಕಾರಣಗಳನ್ನು ವಿವರಿಸುವಂತೆ ಸರ್ಕಾರ ಕೇಳಿದೆ ಎಂದು ತಿಳಿದುಬಂದಿದೆ.

ವಾಟ್ಸಾಪ್‌ನ ಪ್ರಸ್ತಾವಿತ ಬಳಕೆದಾರಹೆಸರು ವೈಶಿಷ್ಟ್ಯದಿಂದ, ದುಷ್ಕರ್ಮಿಗಳು ಫೋನ್ ಸಂಖ್ಯೆಯನ್ನು ಬಹಿರಂಗಪಡಿಸದೇ ಬಳಕೆದಾರರನ್ನು ಸಂಪರ್ಕಿಸಲು ಸಾಧ್ಯವಾಗಬಹುದು. ಇದರಿಂದ ಸೈಬರ್ ಅಪರಾಧ, ವಂಚನೆ ಹಾಗೂ ಗುರುತಿನ ಅನುಕರಣೆ ಪ್ರಕರಣಗಳು ಹೆಚ್ಚಾಗುವ ಆತಂಕವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ, ಸಂಬಂಧಿತ ಸಮಾಲೋಚನೆಗಳು ಪೂರ್ಣಗೊಳ್ಳುವವರೆಗೆ ಹೊಸ ವೈಶಿಷ್ಟ್ಯದ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಮೆಟಾಗೆ ಸೂಚಿಸಲಾಗಿದೆ.

ಟೆಲಿಗ್ರಾಮ್ ಮತ್ತು ಸಿಗ್ನಲ್ ಸಂಸ್ಥೆಗಳು ಬಳಕೆದಾರರ ಗುರುತನ್ನು ಹೇಗೆ ಪರಿಶೀಲಿಸುತ್ತವೆ, ಗುರುತಿನ ಅನುಕರಣೆ ಪ್ರಕರಣಗಳನ್ನು ಹೇಗೆ ನಿರ್ವಹಿಸುತ್ತವೆ ಹಾಗೂ ಬಳಕೆದಾರಹೆಸರುಗಳ ದುರುಪಯೋಗವನ್ನು ತಡೆಯಲು ಯಾವ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತವೆ ಎಂಬ ಕುರಿತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ವಿವರಗಳನ್ನು ಕೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಟೆಲಿಗ್ರಾಮ್ ಕೇಂದ್ರ ಸರ್ಕಾರದ ಪರಿಶೀಲನೆಗೆ ಒಳಪಟ್ಟಿದೆ. ಕಳೆದ ತಿಂಗಳು, ಸೋರಿಕೆಯಾದ ಮತ್ತು ನಕಲಿ ನೀಟ್ ಪ್ರಶ್ನೆಪತ್ರಿಕೆಗಳ ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣಗಳ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಟೆಲಿಗ್ರಾಮ್‌ನ ಕೆಲವು ವೆಬ್ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಅಲ್ಲದೆ, ಅದರ ಮೆಸೇಜ್ ಎಡಿಟ್‌ ವೈಶಿಷ್ಟ್ಯದ ಬಳಕೆಯ ಮೇಲೂ ಜೂನ್ 30ರವರೆಗೆ ನಿರ್ಬಂಧ ಹೇರಲಾಗಿತ್ತು.

Tags

WhatsAppTelegramSignal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X