ಕೋಲ್ಕತ್ತಾ | Air India ವಿಮಾನಕ್ಕೆ ಅಪಹರಣ ಬೆದರಿಕೆ: ವಿಮಾನ ಹಾರಾಟ ಸ್ಥಗಿತ

Photo: NDTV
ಕೋಲ್ಕತ್ತಾ: ಮುಂಬೈಗೆ ತೆರಳುತ್ತಿದ್ದ 'ಏರ್ ಇಂಡಿಯಾ' ವಿಮಾನದಲ್ಲಿ ಅಪಹರಣ ಬೆದರಿಕೆ ಪತ್ರ ಬುಧವಾರ ಬೆಳಗ್ಗೆ ಪತ್ತೆಯಾಗಿದ್ದು, ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿಮಾನವು ಟೇಕ್ ಆಫ್ಗೆ ತಯಾರಿ ನಡೆಸುತ್ತಿದ್ದಾಗ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶದ ಪತ್ರ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ತಿಳಿದ ತಕ್ಷಣ, ಪೈಲಟ್ 'ಏರ್ ಟ್ರಾಫಿಕ್ ಕಂಟ್ರೋಲ್'ಗೆ ಮಾಹಿತಿ ನೀಡಿದ್ದಾರೆ.
ಆ ಬಳಿಕ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹಾಗೂ ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸ್ ಸಿಬ್ಬಂದಿ ವಿಮಾನ ನಿಲ್ದಾಣದ ಆವರಣ ಹಾಗೂ ವಿಮಾನದ ಒಳಗಿನ ಸಿಸಿಟಿವಿ ದೃಶ್ಯವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
Next Story




