ದ್ವೇಷ ಭಾಷಣ ಪ್ರಕರಣ | ಶಾಸಕ ಅಬ್ಬಾಸ್ ಅನ್ಸಾರಿಗೆ ವಿಧಿಸಿದ್ದ ಜೈಲು ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಅಬ್ಬಾಸ್ ಅನ್ಸಾರಿ | PC : PTI
ಲಕ್ನೋ : ದ್ವೇಷ ಭಾಷಣ ಪ್ರಕರಣದಲ್ಲಿ ಉತ್ತರಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಅಲಹಾಬಾದ್ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅನ್ಸಾರಿ ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಿದ ಅಲಹಾಬಾದ್ ಹೈಕೋರ್ಟ್, 2 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಇದರಿಂದಾಗಿ ಅವರು ಶಾಸಕ ಸ್ಥಾನದಲ್ಲೇ ಮುಂದುವರಿಯಲಿದ್ದಾರೆ.
2022ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶಾಸಕ ಅಬ್ಬಾಸ್ ಅನ್ಸಾರಿ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಅನ್ಸಾರಿ ಅವರನ್ನು ಮೌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು. ಅವರು ಅಲಹಾಬಾದ್ ಹೈಕೋರ್ಟ್ನಲ್ಲಿ ಈ ಆದೇಶವನ್ನು ಪ್ರಶ್ನಿಸಿದ್ದರು.
Next Story





