Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿಯದ...

ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿಯದ ಬಿಜೆಪಿಯ 'ಜಾತ್ಯತೀತ' ಮಿತ್ರಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ3 April 2025 8:00 AM IST
share
ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿಯದ ಬಿಜೆಪಿಯ ಜಾತ್ಯತೀತ ಮಿತ್ರಪಕ್ಷಗಳು

ಹೊಸದಿಲ್ಲಿ: ಬಿಜೆಪಿ ವಿಶ್ವಾಸದ್ರೋಹ ಎಸಗಿದೆ, ಬಿಜೆಪಿಗೆ ನೀವು ಸಂಪೂರ್ಣ ಶರಣಾಗಿದ್ದೀರಿ ಎಂಬ ವಿರೋಧ ಪಕ್ಷಗಳ ಟೀಕೆಯನ್ನು ಲೆಕ್ಕಿಸದೇ ಬಿಜೆಪಿಯ 'ಜಾತ್ಯತೀತ' ಮಿತ್ರಪಕ್ಷಗಳು ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವ ಮೂಲಕ ಲೋಕಸಭೆಯಲ್ಲಿ ಬಹುಮತದಿಂದ ಮಸೂದೆ ಅಂಗೀಕಾರವಾಗುವುದನ್ನು ಖಾತರಿಪಡಿಸಿವೆ.

ಪ್ರಾದೇಶಿಕ ಎದುರಾಳಿ ಪಕ್ಷಗಳ 'ಜಾತ್ಯತೀತ' ಎಂಬ ಹಣೆಪಟ್ಟಿಗೆ ಅಗ್ನಿಪರೀಕ್ಷೆ ಎನಿಸಿದ ಈ ಪ್ರಕರಣದಲ್ಲಿ, ತೆಲುಗುದೇಶಂ ಪಕ್ಷ, ಜೆಡಿಯು ಹಾಗೂ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷಗಳು ಸರ್ಕಾರದ ಮಸೂದೆ ಪರವಾಗಿ ಮತ ಚಲಾಯಿಸಿದವು.

ಎನ್ ಡಿಎ ಅಧಿಕಾರಾವಧಿಯ ಪೂರ್ವದಲ್ಲಿ ಮುಸ್ಲಿಮರು ಕೂಡಾ ನಿಮ್ಮ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಏನನ್ನೂ ನೀಡಿಲ್ಲ ಎನ್ನುವ ವಾಸ್ತವವನ್ನು ಆ ಪಕ್ಷಗಳಿಗೆ ಮನವರಿಕೆ ಮಾಡುವ ಪ್ರಯತ್ನವನ್ನೂ ವಿರೋಧ ಪಕ್ಷಗಳು ಮಾಡಿದ್ದವು.

ಆ ಪಕ್ಷಗಳ ಮುಖಂಡರು ಮಾತನಾಡುವ ವೇಳೆ, ಜಂಟಿ ಸಂಸದೀಯ ಸಮಿತಿಯಲ್ಲಿ ಮುಸ್ಲಿಂ ಸಮುದಾಯದ ಹಿತಾಸಕ್ತಿಯನ್ನು ಕಾಪಾಡಲು ಸಾಕಷ್ಟು ಶ್ರಮ ವಹಿಸಿದ್ದೇವೆ ಎಂದು ಸಮರ್ಥಿಸಿಕೊಂಡರು. ವೈಎಸ್ಆರ್‌ಸಿಪಿ ಪ್ರತಿನಿಧಿಗಳು 38 ಜೆಪಿಸಿ ಸಭೆಗಳ ಪೈಕಿ ಕೇವಲ 18ರಲ್ಲಿ ಭಾಗವಹಿಸಿದ್ದಾರೆ ಎಂದು ಟಿಡಿಪಿಯ ಕೃಷ್ಣಪ್ರಸಾದ್ ತೆನ್ನೇಟಿ ಹೇಳಿದರು. ಜತೆಗೆ ರಾಜ್ಯದಲ್ಲಿ ಉರ್ದು ಭಾಷೆಯನ್ನು ಎರಡನೇ ಭಾಷೆಯಾಗಿ ಮಾನ್ಯತೆ ನೀಡಿದ ಮತ್ತು ಹಜ್‌ ಹೌಸ್ ನಿರ್ಮಾಣ ಸೇರಿದಂತೆ ಚಂದ್ರಬಾಬು ನಾಯ್ಡು ಅವರು ಕೈಗೊಂಡ ಮುಸ್ಲಿಂ ಪರ ಕಾರ್ಯಕ್ರಮಗಳನ್ನು ಉಲ್ಲೇಖಿಸಿದರು.

ಜೆಡಿಯು ಸದಸ್ಯ ಹಾಗೂ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಲಾಲನ್, ಪ್ರಧಾನಿ ಮೋದಿಯವರು ಮುಸ್ಲಿಂ ವಿರೋಧಿ ಎಂಬ ಆರೋಪವನ್ನು ಅಲ್ಲಗಳೆದರು. ಇತರ ಹಿಂದುಳಿದ ವರ್ಗಗಳಿಗೆ ಸೇರುವ ಮುಸ್ಲಿಮರು ಮತ್ತು ಪಸವಂಡಾಗಳಿಗೆ ಈ ಮಸೂದೆ ನೆರವಾಗಲಿದೆ ಎಂದು ಸಮರ್ಥಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X