Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ಚುನಾವಣಾ ಕಣಕ್ಕಿಳಿದ...

ಮಧ್ಯಪ್ರದೇಶ: ಚುನಾವಣಾ ಕಣಕ್ಕಿಳಿದ ಬಿಜೆಪಿಯ ಮೂವರು ಕೇಂದ್ರ ಸಚಿವರು, ಏಳು ಸಂಸದರು!

ವಾರ್ತಾಭಾರತಿವಾರ್ತಾಭಾರತಿ26 Sept 2023 7:36 AM IST
share
ಮಧ್ಯಪ್ರದೇಶ: ಚುನಾವಣಾ ಕಣಕ್ಕಿಳಿದ ಬಿಜೆಪಿಯ ಮೂವರು ಕೇಂದ್ರ ಸಚಿವರು, ಏಳು ಸಂಸದರು!

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿರುವ ಬಿಜೆಪಿ ಕಳೆದ 39 ದಿನಗಳಲ್ಲಿ ಎರಡನೇ ಬಾರಿಗೆ ಮತ್ತೊಂದು ಅಚ್ಚರಿಯ ಕಾರ್ಯತಂತ್ರವನ್ನು ಪ್ರದರ್ಶಿಸಿದೆ. ವಿಧಾನಸಭಾ ಚುನಾವಣೆಗೆ 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಅಧಿಕಾರಾರೂಢ ಬಿಜೆಪಿ, ಏಳು ಮಂದಿ ಸಂಸದರು ಮತ್ತು ಮೂವರು ಕೇಂದ್ರ ಸಚಿವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ 19 ವರ್ಷಗಳ ಕಾಲ ಆಳ್ವಿಕೆ ನಡೆಸಿದ ಬಿಜೆಪಿ ಇದೀಗ 230 ಕ್ಷೇತ್ರಗಳ ಪೈಕಿ 78 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಬಹುಶಃ ನವೆಂಬರ್ ನಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಕಳೆದ ಆಗಸ್ಟ್ 17ರಂದು 39 ಮಂದಿಯ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು.

ಏಳು ಮಂದಿ ಸಂಸದರು ಮತ್ತು ವಿಜಯವರ್ಗೀಯ ಅವರನ್ನು ಕಣಕ್ಕೆ ಇಳಿಸುವ ಮೂಲಕ ಪಕ್ಷದ ಸಿಎಂ ಅಭ್ಯರ್ಥಿಯನ್ನು ಅನಾವರಣಗೊಳಿಸುವ ಪ್ರಯತ್ನವನ್ನು ಪಕ್ಷ ಮಾಡುತ್ತಿದೆ ಎನ್ನುವ ಅಭಿಪ್ರಾಯವನ್ನು ರಾಜಕೀಯ ವಿಶ್ಲೇಷಕರು ವ್ಯಕ್ತಪಡಿಸುತ್ತಿದ್ದಾರೆ. ಸುಧೀರ್ಘ ಅವಧಿಗೆ ಸಿಎಂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಥವಾ ಇತರ ಯಾವುದೇ ಮುಖಂಡರನ್ನು ಸಿಎಂ ಅಭ್ಯರ್ಥಿ ಎಂದು ಪಕ್ಷ ಇದುವರೆಗೆ ಘೋಷಿಸಿಲ್ಲ.

ಕ್ಷತ್ರಿಯ ಮುಖಂಡ ನರೇಂದ್ರ ಸಿಂಗ್ ಥೋಮರ್ (ದಿಮಾನಿ), ಪ್ರಹ್ಲಾದ್ ಪಟೇಲ್ (ನರಸಿಂಗಪುರ) ಮತ್ತು ಫಗ್ಗಾನ್ ಸಿಂಗ್ ಕುಲಸ್ತೆ (ನಿವಾಸ್), ವಿಧಾನಸಭಾ ಕಣಕ್ಕೆ ಧುಮುಕುವ ಕೇಂದ್ರ ಸಚಿವರು. ಗಣೇಶ್ ಸಿಂಗ್ (ಸಾತ್ನಾ), ರಾಕೇಶ್ ಸಿಂಗ್ (ಜಬಲ್ಪುರ), ರಿತಿ ಪಾಠಕ್ (ಸಿಧಿ) ಅವರು ಕಣದಲ್ಲಿರುವ ಸಂಸದರು. ಆರು ಬಾರಿಯ ಶಾಸಕ ಕೈಲಾಶ್ ವಿಜಯವರ್ಗೀಯ ಅವರು ಇಂಧೋರ್-1 ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದು, ಹಾಲಿ ಕಾಂಗ್ರೆಸ್ ಶಾಸಕ ಸಂಜಯ್ ಶುಕ್ಲಾ ವಿರುದ್ಧ ಸೆಣೆಸುವರು. ಹತ್ತು ವರ್ಷಗಳ ಬಳಿಕ ವಿಜಯವರ್ಗೀಯ ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X