ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಅಪಘಾತ: ನಾಲ್ವರು ಗಂಭೀರ, 8 ಮಂದಿಗೆ ಗಾಯ

ಶಿಮ್ಲಾ: ಇಂದು ಬೆಳಗ್ಗೆ ಶಿಮ್ಲಾಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ ಮಾಹಿತಿ ಹಂಚಿಕೊಂಡಿದ್ದು, ಸುಂದರ್ ನಗರ ಘಟಕದಿಂದ ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಿದೆ
ಮಂಡಿ ಜಿಲ್ಲೆಯಲ್ಲಿ ರಸ್ತೆ ಹಾಳಾಗಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. accಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಏತನ್ಮಧ್ಯೆ, ಶುಕ್ರವಾರ ಮುಂಜಾನೆ ರಾಜ್ಯದ ಸೋಲನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ನಂತರ ರಾಷ್ಟ್ರೀಯ ಹೆದ್ದಾರಿ-5 ರ ಶಿಮ್ಲಾ-ಕಲ್ಕಾ ರಸ್ತೆಯನ್ನು ಮುಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





