ಚತ್ತೀಸ್ಗಢ: ಗುಂಡಿನ ಕಾಳಗದಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಮೃತ್ಯು

PC : PTI
ನಾರಾಯಣಪುರ: ಚತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್ಜಿ) ಹಾಗೂ ವಿಶೇಷ ಕಾರ್ಯ ಪಡೆ (ಎಸ್ಟಿಎಫ್)ಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ ಸಂದರ್ಭ ಅಂಬುಜಮಾಡ್ ಪ್ರದೇಶದ ಕೊಹಕಾಮೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರಣ್ಯದಲ್ಲಿ ಬುಧವಾರ ಸಂಜೆ ಗುಂಡಿನ ಕಾಳಗ ನಡೆಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಾವೋವಾದಿಗಳ ಮಾಡ್ ವಿಭಾಗದ ಹಿರಿಯ ಸದಸ್ಯರ ಇರುವಿಕೆಯ ಕುರಿತ ಮಾಹಿತಿಯ ಆಧಾರದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ನಾರಾಯಣಪುರ ಹಾಗೂ ಕೊಂಡಗಾಂವ್ ಜಿಲ್ಲೆಗಳಿಗೆ ಸೇರಿದ ಡಿಆರ್ಜಿ ಸಿಬ್ಬಂದಿ ಒಳಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.
ಗುಂಡಿನ ಕಾಳಗ ನಡೆದ ಸ್ಥಳದಲ್ಲಿ ಇದುವರೆಗೆ ಇಬ್ಬರು ಮಹಿಳಾ ನಕ್ಸಲೀಯರ ಮೃತದೇಹ ಹಾಗೂ ಇನ್ಸಾಸ್ ರೈಫಲ್, .315 ಬೋರ್ ರೈಫಲ್ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.





