ಛತ್ತೀಸ್ ಗಡ: ನಕ್ಸಲೀಯರಿಂದ ಸ್ಫೋಟ ; ಐಟಿಬಿಪಿ ಯೋಧ ಸಾವು

ಸಾಂದರ್ಭಿಕ ಚಿತ್ರ | Photo: PTI
ಗರಿಯಾಬಂದ್ : ವಿಧಾನ ಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಛತ್ತೀಸ್ ಗಡದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲೀಯರು ಶುಕ್ರವಾರ ನಡೆಸಿದ ಸ್ಫೋಟದಲ್ಲಿ ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಯೋಧನೋರ್ವ ಮೃತಪಟ್ಟಿದ್ದಾನೆ.
ಮತದಾನ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿಯ ರಕ್ಷಣೆಯೊಂದಿಗೆ ಚುನಾವಣಾ ಸಿಬ್ಬಂದಿ ಹಿಂದಿರುಗುತ್ತಿದ್ದ ಸಂದರ್ಭ ಬಡೆ ಗೊಬ್ರ ಗ್ರಾಮದ ಸಮೀಪ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿಯ ಸಿಬ್ಬಂದಿ ಹೆಡ್ ಕಾನ್ಸ್ಟೇಬಲ್ ಜೋಗಿಂದರ್ ಸಿಂಗ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭದ್ರತಾ ಪಡೆ ತಲುಪಿದೆ ಎಂದು ಅವರು ಹೇಳಿದ್ದಾರೆ.
ಛತ್ತೀಸ್ಗಢ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 90 ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದ ಮತದಾನ ನಡೆಯಿತು. ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆದಿತ್ತು. ಈ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ.
Next Story





