ಛತ್ತೀಸ್ ಗಢ | ಭದ್ರತಾ ಪಡೆಗಳಿಂದ ಮೂವರು ಮಾವೋವಾದಿಗಳ ಹತ್ಯೆ

Photo | ANI
ಸುಕ್ಮಾ (ಛತ್ತೀಸ್ ಗಢ): ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ರವಿವಾರ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವ್ಹಾಣ್, "ಮಾವೋವಾದಿಗಳ ಕುರಿತ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸಿದೆ. ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ” ಎಂದು ತಿಳಿಸಿದ್ದಾರೆ.
“ಗುಂಡಿನ ಚಕಮಕಿಯಲ್ಲಿ ಇಲ್ಲಿಯವರೆಗೆ ಮೂವರು ಮಾವೋವಾದಿಗಳು ಮೃತಪಟ್ಟಿದ್ದು, ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ” ಎಂದು ಹೇಳಿದ್ದಾರೆ.
Next Story





