Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಕಾಕ್ರೋಚ್' ಪ್ರತಿಭಟನೆಗೂ ಮುನ್ನ ಮೂವರು...

'ಕಾಕ್ರೋಚ್' ಪ್ರತಿಭಟನೆಗೂ ಮುನ್ನ ಮೂವರು ವಕ್ತಾರರನ್ನು ನೇಮಿಸಿದ CJP

ವಾರ್ತಾಭಾರತಿವಾರ್ತಾಭಾರತಿ3 Jun 2026 8:41 PM IST
share
ಕಾಕ್ರೋಚ್ ಪ್ರತಿಭಟನೆಗೂ ಮುನ್ನ ಮೂವರು ವಕ್ತಾರರನ್ನು ನೇಮಿಸಿದ CJP

ಹೊಸದಿಲ್ಲಿ, ಜೂ. 3: ವಿಡಂಬನಾತ್ಮಕ ಆನ್‌ಲೈನ್ ಸಮೂಹವಾಗಿ ಪ್ರಾರಂಭವಾದ ಕಾಕ್ರೋಚ್ ಜನತಾ ಪಾರ್ಟಿ (CJP) ‘ಪ್ರತಿಭಟನಾ ಚಳುವಳಿಯ ಪರವಾಗಿ ಸಾರ್ವಜನಿಕರು ಮತ್ತು ಮಾಧ್ಯಮಗಳೊಂದಿಗೆ ಮಾತನಾಡಲು’ ಮೂವರು ವಕ್ತಾರರನ್ನು ನೇಮಕ ಮಾಡಿರುವುದಾಗಿ ಬುಧವಾರ ಘೋಷಿಸಿದೆ.

‘ತನಿಖಾ ಪತ್ರಕರ್ತ ಸೌರವ್ ದಾಸ್ ಮುಖ್ಯ ವಕ್ತಾರರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಅವರೊಂದಿಗೆ ರಾಜಕೀಯ ಸಂಶೋಧಕಿ, ಲೇಖಕಿ ಮತ್ತು ಚಲನಚಿತ್ರ ನಿರ್ಮಾಪಕಿ ವಿಜೇತ ದಹಿಯಾ ಹಾಗೂ ಅಶುತೋಷ್ ರಾಂಕಾ ಅವರು ಕೂಡ ವಕ್ತಾರರಾಗಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಸಿಜೆಪಿ ತನ್ನ ಸಾಮಾಜಿಕ ಮಾಧ್ಯಮ ಖಾತೆ ‘ಎಕ್ಸ್‌’ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ರಾಜಕೀಯ ಸಂಕಥನವನ್ನು ಬದಲಾಯಿಸಲು ಸಿಜೆಪಿ ಬದ್ಧವಾಗಿದೆ. ಇದನ್ನು ಹೊಸ ಪೀಳಿಗೆಯ ನಾಯಕರು ಮುನ್ನಡೆಸಲಿದ್ದಾರೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ದಿಲ್ಲಿಯ ಇಂಡಿಯಾ ಗೇಟ್‌ನಲ್ಲಿ 2025ರ ನವೆಂಬರ್‌ನಲ್ಲಿ ನಡೆದ ಮಾಲಿನ್ಯ ವಿರೋಧಿ ಪ್ರತಿಭಟನೆಯನ್ನು ಮುನ್ನಡೆಸಿದವರಲ್ಲಿ ಸೌರವ್ ದಾಸ್ ಕೂಡ ಒಬ್ಬರಾಗಿದ್ದರು ಎಂದು ಈ ಸಮೂಹ ತಿಳಿಸಿದೆ.

ಈ ಮೂವರು ಚಳುವಳಿಯನ್ನು ಬಲಪಡಿಸಲಿದ್ದಾರೆ. ದಾಸ್ ಅವರು ಹೊಣೆಗಾರಿಕೆ ಆಧಾರಿತ ಸಂದೇಶಗಳನ್ನು ರವಾನಿಸಲಿದ್ದಾರೆ. ದಹಿಯಾ ಅವರು ನಾಗರಿಕ ಸಮಾಜದೊಂದಿಗಿನ ಒಡನಾಟದ ನೇತೃತ್ವ ವಹಿಸಲಿದ್ದಾರೆ. ರಾಂಕಾ ಅವರು ವಿದ್ಯಾವಂತ ಯುವಕರು ಮತ್ತು ತಂತ್ರಜ್ಞಾನ ವೃತ್ತಿಪರರ ನಡುವೆ ಈ ಸಮೂಹದ ಆಕರ್ಷಣೆಯನ್ನು ಬಲಪಡಿಸಲು ಶ್ರಮಿಸಲಿದ್ದಾರೆ.

ನಿರುದ್ಯೋಗಿ ಯುವಕರ ಕುರಿತು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಗಳ ವಿರುದ್ಧದ ಆಕ್ರೋಶದ ನಂತರ ಈ ತಿಂಗಳು ಸಿಜೆಪಿ ವೇದಿಕೆಯನ್ನು ಪ್ರಾರಂಭಿಸಲಾಯಿತು. ಇದು ಈಗ ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಾಮಾಜಿಕ ಮಾಧ್ಯಮ ಚಳುವಳಿಗಳಲ್ಲಿ ಒಂದಾಗಿದೆ. ಸಿಜೆಪಿ ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಬೆಂಬಲಿಗರನ್ನು ಹೊಂದಿದ್ದು, ಭಾರತದ ಶಿಕ್ಷಣ ವಲಯದಲ್ಲಿನ ಪರೀಕ್ಷಾ ಅಕ್ರಮಗಳು ಮತ್ತು ಹೊಣೆಗಾರಿಕೆಯ ವೈಫಲ್ಯಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶವನ್ನು ಒಗ್ಗೂಡಿಸುತ್ತಿದೆ.

Tags

Cockroach Janta PartyDelhi protestAbhijeet Dipke
share
ವಾರ್ತಾಭಾರತಿ
ವಾರ್ತಾಭಾರತಿ
Next Story
X