Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ ಘಟನೆ ಸಂತ್ರಸ್ತೆಯರನ್ನು...

ಮಣಿಪುರ ಘಟನೆ ಸಂತ್ರಸ್ತೆಯರನ್ನು ಭೇಟಿಯಾಗಲು ನಾಗರಿಕ ಸಂಘಟನೆಗಳ ಪ್ರತಿರೋಧದಿಂದ ಸಾಧ್ಯವಾಗಿಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ31 July 2023 3:40 PM IST
share
ಮಣಿಪುರ ಘಟನೆ ಸಂತ್ರಸ್ತೆಯರನ್ನು ಭೇಟಿಯಾಗಲು ನಾಗರಿಕ ಸಂಘಟನೆಗಳ ಪ್ರತಿರೋಧದಿಂದ ಸಾಧ್ಯವಾಗಿಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ

ಹೊಸದಿಲ್ಲಿ: ಮಣಿಪುರದಲ್ಲಿ ಮೂವರು ಮಹಿಳೆಯರ ಮೇಲೆ ನಡೆದ ಲೈಂಗಿಕ ಹಲ್ಲೆಯಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಇಂತಹ ಎಲ್ಲಾ ಪ್ರಕರಣಗಳನ್ನು ಮಣಿಪುರ ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ ಹಾಗೂ ಅವರು ನೇರವಾಗಿ ತನಿಖೆಯ ಉಸ್ತುವಾರಿ ನೋಡಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟಿಗೆ ಕಳೆದ ವಾರ ಸಲ್ಲಿಸಿದ ವರದಿಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಮನಃಶಾಸ್ತ್ರಜ್ಞೆಯರನ್ನೊಳಗೊಂಡ ಮಹಿಳಾ ತಂಡವೊಂದನ್ನು ಸಂತ್ರಸ್ತೆಯರ ಸಹಾಯಕ್ಕಾಗಿ ರಚಿಸಲಾಗಿದೆಯಾದರೂ, ಚುರಚಂದಪುರದ ನಾಗರಿಕ ಸಮಾಜ ಸಂಘಟನೆಗಳ ಪ್ರತಿರೋಧದಿಂದಾಗಿ ರಾಜ್ಯದ ಆಡಳಿತವು ಸಂತ್ರಸ್ತೆಯರನ್ನು ಮುಖಃತ ಅಥವಾ ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗಿಲ್ಲ, ಅವರ ಕುಟುಂಬಗಳು ಘಟನೆ ನಂತರ ಪರಾರಿಯಾಗಿವೆ ಎಂದೂ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಮಣಿಪುರದಲ್ಲಿ ಮೂವರು ಮಹಿಳೆಯರ ನಗ್ನ ಮೆರವಣಿಗೆ ನಡೆಸಿ ಅವರ ಮೇಳೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯಿಂದ ತನಗೆ ತೀವ್ರ ಆತಂಕವಾಗಿದೆ ಎಂದು ಜುಲೈ 20ರಂದು ಹೇಳಿದ್ದ ಸುಪ್ರೀಂ ಕೋರ್ಟ್‌ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಯಾವ ಕ್ರಮಕೈಗೊಳ್ಳಲಾಗಿದೆ ಎಂದು ವಿವರಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೂಚಿಸಿತ್ತು.

ಜುಲೈ 28ರಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಕೇಂದ್ರ ಗೃಹ ಸಚಿವಾಲಯ ಅಲ್ಲಿನ ಬೆಳವಣಿಗೆಗಳನ್ನು ಸತತ ಅವಲೋಕಿಸುತ್ತಿದೆ ಎಂದು ಅದರಲ್ಲಿ ಹೇಳಲಾಗಿದೆಯಲ್ಲದೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ನಿರ್ಧಾರ ಹಾಗೂ ವಿಚಾರಣೆಯನ್ನು ಮಣಿಪುರದ ಹೊರಗಿನ ನ್ಯಾಯಾಲಯದಲ್ಲಿ ನಡೆಸುವ ಇಂಗಿತದ ಬಗ್ಗೆ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಆದರೆ ಈ ನಿಟ್ಟಿನಲ್ಲಿ ಅನುಮತಿಸುವ ಅಧಿಕಾರ ಸುಪ್ರೀಂ ಕೋರ್ಟಿಗೆ ಮಾತ್ರ ಇರುವುದರಿಂದ ಈ ಕುರಿತಂತೆ ಆದೇಶ ಹೊರಡಿಸುವಂತೆ ಕೋರಲಾಗಿದೆ.

ದೌರ್ಜನ್ಯ ಪ್ರಕರಣಗಳ ಸಂತ್ರಸ್ತೆಯರಿಗೆ ಸೂಕ್ತ ಪುನರ್ವಸತಿ ಕುರಿತಂತೆ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

Tags

MHA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X