ಮೊಂಥಾ ಚಂಡಮಾರುತ | ಆಂಧ್ರಪ್ರದೇಶ ಕರಾವಳಿ, ಒಡಿಶಾದಲ್ಲಿ ಭಾರೀ ಮಳೆ : ಕಾಕಿನಾಡ ಬಳಿ ಭೂಕುಸಿತದ ಭೀತಿ

Photo | timesofindia
ಅಮರಾವತಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂಥಾ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಂಧ್ರ ಕರಾವಳಿ, ಒಡಿಶಾದಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಚಂಡಮಾರುತದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಂಟೆಗೆ 110 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಈ ಚಂಡಮಾರುತ ಈಗಾಗಲೇ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯನ್ನು ಸೃಷ್ಟಿಸಿದೆ.
ಮಂಗಳವಾರ ಸಂಜೆ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣಂ ನಡುವಿನ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ನಿರೀಕ್ಷೆಯಿರುವುದರಿಂದ, ಒಡಿಶಾ ಮತ್ತು ಆಂಧ್ರಪ್ರದೇಶ ಸರಕಾರಗಳು ಕಟ್ಟೆಚ್ಚರವನ್ನು ವಹಿಸಿದೆ. ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ರಕ್ಷಣಾ ತಂಡಗಳನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಸರಕಾರ ಕಾಕಿನಾಡ, ಕೊನಸೀಮಾ, ಪಶ್ಚಿಮ ಗೋದಾವರಿ, ಎಲೂರು ಮತ್ತು ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಚಂಡಮಾರುತ ಸಂಬಂಧಿತ ಪ್ರಾಣಹಾನಿಗಳನ್ನು ತಡೆಗಟ್ಟುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಂಡಮಾರುತದಿಂದಾಗಿ 97 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಲವಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.





