ಸೋನಮ್ ವಾಂಗ್ಚುಕ್ ರನ್ನು ಆಸ್ಪತ್ರೆಗೆ ದಾಖಲಿಸಿದ ದಿಲ್ಲಿ ಪೊಲೀಸರು

Photo: screengrab/x.com/ANI/media
ಹೊಸದಿಲ್ಲಿ: ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಜೂನ್ 28 ರಿಂದ ಹೊಸದಿಲ್ಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ದಿಲ್ಲಿ ಪೋಲೀಸರು ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
59 ವರ್ಷದ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ನ ಆದೇಶಗಳು ಮತ್ತು ವೈದ್ಯಕೀಯ ತಜ್ಞರ ಸಲಹೆಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.
ಹೈಕೋರ್ಟ್ನ ಆದೇಶದಂತೆ, ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ಞರ ಸಲಹೆಯ ಮೇರೆಗೆ, ಅಗತ್ಯ ವೈದ್ಯಕೀಯ ಆರೈಕೆಗಾಗಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೈಕೋರ್ಟ್ನ ಆದೇಶಗಳನ್ನು ಪಾಲಿಸುವಾಗ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದರು. ಇದರಿಂದಾಗಿ ಸಣ್ಣ ಮಟ್ಟದ ಗದ್ದಲ ಉಂಟಾಯಿತು. ಆದಾಗ್ಯೂ, ಪೊಲೀಸರು ಗರಿಷ್ಠ ಮಟ್ಟದ ಸಂಯಮವನ್ನು ಕಾಯ್ದುಕೊಂಡು, ಸುರಕ್ಷಿತವಾಗಿ ಈ ಕಾರ್ಯಾಚರಣೆಯನ್ನು ನಡೆಸಿದರು. ಜಂತರ್ ಮಂತರ್ನಲ್ಲಿರುವ ಪ್ರತಿಭಟನಾಕಾರರು ಆದಷ್ಟು ಬೇಗ ಶಾಂತಿಯುತವಾಗಿ ಸ್ಥಳವನ್ನು ಖಾಲಿ ಮಾಡಬೇಕಾಗಿ ವಿನಂತಿಸುತ್ತೇವೆ," ಎಂದು ದಿಲ್ಲಿ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.






