ಮದ್ಯ ಹಗರಣ: ಛತ್ತೀಸ್ ಗಢ ಮಾಜಿ ಸಿಎಂ ಭೂಪೇಶ್ ಭಗೇಲ್ ರ ಪುತ್ರನನ್ನು ಬಂಧಿಸಿದ ಈಡಿ

ಚೈತನ್ಯ ಭಗೇಲ್ (Photo credit: Facebook)
ಹೊಸದಿಲ್ಲಿ: ಛತ್ತೀಸ್ ಗಢ ರಾಜ್ಯದ ಬಹುಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಮುಖ್ಯಮಂತ್ರಿ ಭೂಪೇಶ್ ಭಗೇಲ್ ರ ಪುತ್ರ ಚೈತನ್ಯ ಭಗೇಲ್ ರನ್ನು ಬಂಧಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಗೇಲ್ ರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚರಣೆ ನಡೆಸಿತು ಎಂದು ವರದಿಯಾಗಿದೆ.
ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೊರೆತಿರುವ ಹೊಸ ಸಾಕ್ಷ್ಯಾಧಾರಗಳನ್ನು ಆಧರಿಸಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದುರ್ಗ್ ಜಿಲ್ಲೆಯ ಭಿಲಾಯಿ ಪಟ್ಟಣದಲ್ಲಿರುವ ತಂದೆ-ಪುತ್ರನ ಜಂಟಿ ಒಡೆತನದ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story





