ಶಿಕೋಪುರ ಭೂ ವ್ಯವಹಾರ ಪ್ರಕರಣ : ರಾಬರ್ಟ್ ವಾದ್ರಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

Photo | PTI
ಹೊಸದಿಲ್ಲಿ: ಶಿಕೋಪುರ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಈಡಿ) ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ.
2008ರಲ್ಲಿ ಗುರುಗ್ರಾಮದ ಶಿಕೋಪುರದಲ್ಲಿ ನಡೆದ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ರಾಬರ್ಟ್ ವಾದ್ರಾ, ಇತರರು ಹಾಗೂ ಕೆಲ ಸಂಸ್ಥೆಗಳ ವಿರುದ್ಧ ಜಾರಿ ನಿರ್ದೇಶನಾಲಯ(ಈಡಿ)ದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಯ ನಿಬಂಧನೆಗಳ ಅಡಿಯಲ್ಲಿ ವಾದ್ರಾ ಮತ್ತು ಇತರರ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಾಬರ್ಟ್ ವಾದ್ರಾ ಮತ್ತು ಅವರ ಕಂಪೆನಿ ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಸೇರಿದ 37.6 ಕೋಟಿ ಮೌಲ್ಯದ 43 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಪ್ರಕರಣದಲ್ಲಿ ಏಪ್ರಿಲ್ 8ರಂದು ತನಿಖಾ ಸಂಸ್ಥೆ ಮೊದಲ ಬಾರಿಗೆ ವಾದ್ರಾಗೆ ಸಮನ್ಸ್ ಜಾರಿ ಮಾಡಿತ್ತು. ಏಪ್ರಿಲ್ 15ರಂದು ವಾದ್ರಾ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.





