ಮತಗಟ್ಟೆಯಲ್ಲಿ ಬೆರಳು, ಐರಿಸ್ ಬಯೋಮೆಟ್ರಿಕ್ ಅನುಷ್ಠಾನ ಕೋರಿ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಸಾಂದರ್ಭಿಕ ಚಿತ್ರ | Photo Credit : freepik
ಹೊಸದಿಲ್ಲಿ: ಚುನಾವಣಾ ಅಕ್ರಮಗಳನ್ನು ತಡೆಯಲು ಚುನಾವಣೆ ಸಂದರ್ಭ ಮತಗಟ್ಟೆಗಳಲ್ಲಿ ಬೆರಳು ಹಾಗೂ ಐರಿಸ್ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ದೇಶಿಸುವಂತೆ ಕೋರಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಚುನಾವಣಾ ಆಯೋಗ, ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳಿಗೆ ನೋಟಿಸು ಜಾರಿ ಮಾಡಿದೆ.
ಅರ್ಜಿದಾರರ ವಾದವನ್ನು ಕೇಳಿದ ಬಳಿಕ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ಜೋಯ್ಮಲ್ಯ ಬಾಗ್ಚಿ ಅವರ ಪೀಠ ಚುನಾವಣಾ ಆಯೋಗ, ಕೇಂದ್ರ ಸರಕಾರ ಹಾಗೂ ಇತರರ ಪ್ರತಿಕ್ರಿಯೆ ಕೋರಿತು.
ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ. ಗುರುತಿನ ಪರಿಶೀಲನೆಯಲ್ಲಿ ಯಾವುದೇ ಕೊರತೆ ಇದ್ದರೆ, ಅದು ಚುನಾವಣಾ ಫಲಿತಾಂಶದ ನ್ಯಾಯಸಮ್ಮತತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.
Next Story




