Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಚರಾಜ್ಯಗಳಿಗೆ ವಿಧಾನಸಭಾ ಚುನಾವಣೆ...

ಪಂಚರಾಜ್ಯಗಳಿಗೆ ವಿಧಾನಸಭಾ ಚುನಾವಣೆ ಘೋಷಣೆ–ನವೆಂಬರ್‌ನಲ್ಲಿ ಚುನಾವಣೆ

ಡಿಸೆಂಬರ್‌ 3 ರಂದು ಮತ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ9 Oct 2023 12:41 PM IST
share
ಪಂಚರಾಜ್ಯಗಳಿಗೆ ವಿಧಾನಸಭಾ ಚುನಾವಣೆ ಘೋಷಣೆ–ನವೆಂಬರ್‌ನಲ್ಲಿ ಚುನಾವಣೆ

ಹೊಸದಿಲ್ಲಿ: ಭಾರತದ ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ.

ಮಿಜೋರಾಂನಲ್ಲಿ ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದರೆ, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 7 ಮತ್ತು ನವೆಂಬರ್ 17ರಂದು, ರಾಜಸ್ಥಾನದಲ್ಲಿ ನವೆಂಬರ್‌ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್‌ 30ರಂದು ಚುನಾವಣೆ ನಡೆಯಲಿದೆ.

2024 ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಈ ವಿಧಾನಸಭಾ ಚುನಾವಣೆಗಳು ನಡೆಯಲಿರುವುದರಿಂದ ಅತ್ಯಂತ ಮಹತ್ವ ಪಡೆದಿವೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರವಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕ್ರಮವಾಗಿ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರಗಳಿದ್ದರೆ, ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಹಾಗೂ ಮಿಜೋರಾಂನಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಸರಕಾರವಿದೆ.

ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ವಿಧಾನಸಭೆಗಳ ಅವಧಿಯು ಜನವರಿ 2024 ರಲ್ಲಿ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳಲಿವೆ, ಮಿಜೋರಾಂ ವಿಧಾನಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಅಂತ್ಯವಾಗಲಿದೆ.

ರಾಜ್ಯ

ಮತದಾನ ದಿನಾಂಕ

ಮತ ಎಣಿಕೆ

ಮಧ್ಯಪ್ರದೇಶ

ನವೆಂಬರ್ 17

ಡಿಸೆಂಬರ್ 3

ರಾಜಸ್ಥಾನ

ನವೆಂಬರ್ 23

ಡಿಸೆಂಬರ್ 3

ತೆಲಂಗಾಣ

ನವೆಂಬರ್ 30

ಡಿಸೆಂಬರ್ 3

ಛತ್ತೀಸ್‌ಗಢ

ನವೆಂಬರ್ 7 ಮತ್ತು 17

ಡಿಸೆಂಬರ್ 3

ಮಿಜೋರಾಂ

ನವೆಂಬರ್ 7

ಡಿಸೆಂಬರ್ 3

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕಗಳ ಕುರಿತು ಮಾಹಿತಿ ನೀಡಿದರು.

► ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಒಟ್ಟು 679 ವಿಧಾಸನಭಾ ಕ್ಷೇತ್ರಗಳಿವೆ.

► ಭಾರತದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರನೇ ಒಂದು ಭಾಗದಷ್ಟು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 16.14 ಕೋಟಿ ಮತದಾರರು, ಅಂದರೆ ಭಾರತದ ಒಟ್ಟು ಮತದಾರರ ಪೈಕಿ ಆರನೇ ಒಂದರಷ್ಟು ಮಂದಿ ಮತ ಚಲಾಯಿಸಲಿದ್ದಾರೆ.

► "40 ದಿನಗಳ ಅವಧಿಯಲ್ಲಿ ನಾವು ಎಲ್ಲಾ 5 ರಾಜ್ಯಗಳಿಗೆ ಭೇಟಿ ನೀಡಿದ್ದೇವೆ ಮತ್ತು ಅಲ್ಲಿನ ರಾಜಕೀಯ ಪಕ್ಷಗಳು ಹಾಗೂ ಕೇಂದ್ರ ಮತ್ತು ರಾಜ್ಯ ಜಾರಿ ಏಜನ್ಸಿಗಳೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು.

► ಈ ಐದು ರಾಜ್ಯಗಳಲ್ಲಿ 16 ಲಕ್ಷ ಹೊಸ ಮತದಾರರು ನೋಂದಾಯಿತರಾಗಿದ್ದಾರೆ.

► ಈ ಐದು ರಾಜ್ಯಗಳಾದ್ಯಂತ 177 ಲಕ್ಷ ಮತಗಟ್ಟೆಗಳಿರಲಿವೆ.

► ಎಲ್ಲಾ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಸೇರ್ಪಡೆಗೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

► ತೃತೀಯಲಿಂಗಿಗಳನ್ನೂ ಮತದಾರರ ಪಟ್ಟಿಗೆ ಸೇರಿಸಿ ಎಲ್ಲರನ್ನು ಒಳಗೊಳ್ಳುವಂತೆ ಮಾಡಲಾಗುವುದು ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

► ವಯಸ್ಸಾದ ಮತದಾರರಿಗೆ ಮನೆಗಳಿಂದಲೇ ಮತ ಚಲಾಯಿಸಲು ಐದು ದಿನ ಕಾಲಾವಕಾಶ ನೀಡಲಾಗುವುದು.

► ಯಾವುದೇ ಓಲೈಕೆಗಳು ಅಥವಾ ಭ್ರಷ್ಟಾಚಾರದ ಬಗ್ಗೆ ಎಚ್ಚರಿಕೆ ನೀಡಲು ವಿಜಿಲ್ ಆಪ್‌ ಬಳಸಲಾಗುವುದು.

► ವಿಜಿಲ್‌ ದೂರುಗಳಿಗೆ 100 ನಿಮಿಷಗಳೊಳಗೆ ಸ್ಪಂದಿಸಲಾಗುವುದು.

► ಎಲ್ಲಾ ರಾಜಕೀಯ ಪಕ್ಷಗಳು ಅಕ್ಟೋಬರ್ 31 ರೊಳಗೆ ತಾವು ಸ್ವೀಕರಿಸಿದ ಕೊಡುಗೆಗಳು ಮತ್ತು ದೇಣಿಗೆಗಳನ್ನು ವರದಿ ಮಾಡಬೇಕು

► ರಾಜಕೀಯ ಪಕ್ಷಗಳು ತಮ್ಮ ವಾರ್ಷಿಕ ವೆಚ್ಚದ ವರದಿಯನ್ನು ಡಿಜಿಟಲ್ ರೂಪದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು.

► ಎಲ್ಲಾ ರಾಜ್ಯ ಮತ್ತು ಕೇಂದ್ರ ಏಜೆನ್ಸಿಗಳು ತಾವು ವಶಡಿಸಿಕೊಂಡ ವಸ್ತುಗಳ ಮಾಹಿತಿಯನ್ನು ಕೇಂದ್ರ ಡೇಟಾಬೇಸ್‌ನಲ್ಲಿ ನಮೂದಿಸಬೇಕಿದೆ. ಈ ವ್ಯವಸ್ಥೆಯನ್ನು ಮೊದಲ ಬಾರಿ ಜಾರಿಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X