ಪಂಚ ರಾಜ್ಯ ಚುನಾವಣಾ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ್ಯಾಲಿ ನಿಷೇಧಿಸಿದ ಚುನಾವಣಾ ಆಯೋಗ

ಚುನಾವಣಾ ಆಯೋಗ | Photo credit : PTI
ಕೋಲ್ಕತ್ತಾ: ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಸೋಮವಾರ ವಿಜಯೋತ್ಸವ ರ್ಯಾಲಿಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.
ಚುನಾವಣಾ ಫಲಿತಾಂಶದ ಬಳಿಕ ಅಭ್ಯರ್ಥಿಗಳಿಗೆ ವಿಜಯೋತ್ಸವ ರ್ಯಾಲಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಘೋಷಣೆಯ ನಂತರ ಸೋಮವಾರ ರಾಜ್ಯದಲ್ಲಿ ಎಲ್ಲಿಯೂ ಅಭ್ಯರ್ಥಿಗಳಿಗೆ ವಿಜಯೋತ್ಸವ ರ್ಯಾಲಿ ಆಚರಿಸಲು ಅವಕಾಶ ನೀಡುವುದಿಲ್ಲ ಎಂದು ವಿಶೇಷ ಚುನಾವಣಾ ವೀಕ್ಷಕ ಸುಬ್ರತಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
Next Story




