12 ರಾಜ್ಯಗಳಲ್ಲಿ ಎರಡನೇ ಹಂತದಲ್ಲಿ ಎಸ್ಐಆರ್ : ಸಿಇಸಿ ಜ್ಞಾನೇಶ್ ಕುಮಾರ್

Photo | NDTV
ಹೊಸದಿಲ್ಲಿ : ಬಿಹಾರ ವಿಧಾನ ಸಭಾ ಚುನಾವಣೆಯ ಬಳಿಕ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದರು.
ದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಞಾನೇಶ್ ಕುಮಾರ್, ಮೊದಲ ಹಂತದಲ್ಲಿ ಬಿಹಾರ ಚುನಾವಣೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗಿತ್ತು. ಈ ಪ್ರಕ್ರಿಯೆ ವಿವಾದಕ್ಕೆ ಕಾರಣವಾಯಿತು. ಪ್ರತಿಪಕ್ಷಗಳಿಂದ ಪ್ರತಿಭಟನೆಗಳು ನಡೆದವು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಸಮಯದ ಬಗ್ಗೆ ಪ್ರಶ್ನೆ ಭುಗಿಲೆದ್ದಿತ್ತು. ಆದರೆ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.
ಎಸ್ಐಆರ್ನ ಎರಡನೇ ಹಂತಕ್ಕೆ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಮಂಗಳವಾರದಿಂದ ಆರಂಭವಾಗಲಿದೆ. ಯಾವುದೇ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡದಂತೆ ಮತ್ತು ಯಾವುದೇ ಅನರ್ಹ ಮತದಾರರು ಪಟ್ಟಿಗೆ ಸೇರದಂತೆ ಎಸ್ಐಆರ್ ಖಚಿತಪಡಿಸುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ.







