ಷೇರು ಮಾರುಕಟ್ಟೆ ಹಗರಣ | ಎಫ್ಐಆರ್ ಆದೇಶ ರದ್ದತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಸೆಬಿ ಮಾಜಿ ಮುಖ್ಯಸ್ಥೆ

Photo : X/@intradaygeeks
ಮುಂಬೈ: ಷೇರು ಮಾರುಕಟ್ಟೆ ಹಗರಣ ಆರೋಪದ ಸಂಬಂಧ ಸೆಬಿ ಮಾಜಿ ಮುಖ್ಯಸ್ಥೆ ಮಾಧಬಿ ಬುಚ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ವಿಶೇಷ ನ್ಯಾಯಲಯವೊಂದು ಪೊಲೀಸರಿಗೆ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ ಸೆಬಿಯ ಮಾಜಿ ಮುಖ್ಯಸ್ಥೆ ಮಾಧಬಿ ಬುಚ್ ಹಾಗೂ ಇನ್ನಿತರ ಐವರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Next Story





