ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಖುಲಾಸೆ

Photo | indiatoday
ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದಿಲ್ಲಿಯ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.
ಭಾರತೀಯ ಕುಸ್ತಿ ಫೆಡರೇಶನ್ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಬ್ರಿಜ್ ಭೂಷಣ್ ಮೇಲಿತ್ತು. ಈ ಬಗ್ಗೆ ಕ್ರಮ ಕೈಗಗೊಳ್ಳದಿರುವುದರ ವಿರುದ್ಧ ಮಹಿಳಾ ಕುಸ್ತಿಪಟುಗಳು ಹಲವು ತಿಂಗಳುಗಳ ಕಾಲ ಧರಣಿ ನಡೆಸಿದ್ದರು.
ಬಳಿಕ ದಿಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯ 2024ರಲ್ಲಿ ಆರೋಪಗಳನ್ನು ರೂಪಿಸಿ ವಿಚಾರಣೆ ಆರಂಭಿಸಿತ್ತು. ವಿಚಾರಣೆ ಪೂರ್ಣಗೊಂಡ ಬಳಿಕ ಕಳೆದ ಜುಲೈನಲ್ಲಿ ತೀರ್ಪು ಕಾಯ್ದಿರಿಸಲಾಗಿತ್ತು. ಸೋಮವಾರ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.
Next Story




