Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check: ದೆಹಲಿ ಪೊಲೀಸರಿಗೆ ಬೆದರಿಕೆ...

Fact Check: ದೆಹಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಶಾಸಕ ಅಮಾನತುಲ್ಲಾ ಖಾನ್ ಬಂಧನ ಎಂದು ಹಳೆಯ ವೀಡಿಯೊ ವೈರಲ್

newsmeter.innewsmeter.in21 Feb 2025 5:39 PM IST
share
Fact Check: ದೆಹಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಶಾಸಕ ಅಮಾನತುಲ್ಲಾ ಖಾನ್ ಬಂಧನ ಎಂದು ಹಳೆಯ ವೀಡಿಯೊ ವೈರಲ್

Claim: ತನ್ನನ್ನು ಬಂಧಿಸಲು ಹೋದ ದೆಹಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಶಾಸಕ ಅಮಾನತುಲ್ಲಾ ಖಾನ್ ಬಂಧನ.

Fact: ಏಪ್ರಿಲ್ 2023 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಿಬಿಐ ಸಮನ್ಸ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಪೊಲೀಸರು ಬಂಧಿಸಿದ ವೀಡಿಯೊ ಇದಾಗಿದೆ.

ಫೆಬ್ರವರಿ 13, 2025 ರಂದು, ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಕೊಲೆ ಯತ್ನದ ಆರೋಪಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡ ಕುರಿತು ವಿಚಾರಣೆ ನಡೆಸಿದ್ದರು. ಆದಾಗ್ಯೂ, ವಿಚಾರಣೆಗೆ ಮುನ್ನ, ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಫೆಬ್ರವರಿ 24 ರವರೆಗೆ ಅವರ ಬಂಧನಕ್ಕೆ ತಡೆ ನೀಡಿತು. ಇದರ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಅಮಾನತುಲ್ಲಾ ಖಾನ್ ಅವರ ವೀಡಿಯೊ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹಂಚಿಕೊಳ್ಳುವಾಗ, ಬಳಕೆದಾರರು ಎಎಪಿ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಫೇಸ್​ಬುಕ್ ಬಳಕೆದಾರರೊಬ್ಬರು ಫೆಬ್ರವರಿ 15, 2025 ರಂದು ಈ ವೀಡಿಯೊವನ್ನು ಹಂಚಿಕೊಂಡು, ‘‘ಇದು ನಮ್ಮ ಏರಿಯಾ. ಇಲ್ಲಿಂದ ಹೊರಟು ಹೋಗಿ, ಇಲ್ಲದಿದ್ದರೆ ಜೀವಂತವಾಗಿ ಹೊರಗೆ ಹೋಗುವುದು ನಿಮಗೆ ಕಷ್ಟವಾಗಬಹುದು. ನಮ್ಮ ಒಂದು ಕೂಗಿಗೆ ಎಷ್ಟು ಜನ ಸೇರುತ್ತಾರೆಂದರೆ ನೀವು ಎಲ್ಲಿದ್ದಿರೀ ಎಂದು ನಿಮಗೇ ತಿಳಿಯುವುದಿಲ್ಲ ಎಂದು ತನ್ನನ್ನು ಬಂಧಿಸಲು ಹೋದ ದೆಹಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ. ದೆಹಲಿಯ ಶಾಸಕ ಅಮಾನತುಲ್ಲಾ ಖಾನ್ ನನ್ನು ದೇಹಲಿ ಪೋಲಿಸರು ಬಂಧಿಸಿ ತಮ್ಮ ವಶಕ್ಕೆ ಪಡೆಯುತ್ತಿರುವ ಕ್ಷಣ...’’ ಎಂದು ಬರೆದುಕೊಂಡಿದ್ದಾರೆ. (Archive)

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಹೀಗಾಗಿ ಈ ವೀಡಿಯೊ ಇತ್ತೀಚಿನ ಯಾವುದೇ ಘಟಗನೆಗೆ ಸಂಬಂಧಿಸಿಲ್ಲ ಎಂಬುದು ತಿಳಿಯಿತು. ಇದರಿಂದ ಸುಳಿವು ಪಡೆದುಕೊಂಡು ನಾವು ಗೂಗಲ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ. ಆಗ ಏಪ್ರಿಲ್ 17, 2023 ರಂದು ದಿ ಹಿಂದೂ ಪತ್ರಿಕೆಯ ವರದಿ ಸಿಕ್ಕಿತು. "ಸಿಬಿಐ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದನ್ನು ಪ್ರತಿಭಟಿಸಲು ಎಎಪಿ ಸರ್ವ ಪ್ರಯತ್ನ ನಡೆಸುತ್ತದೆ; 1,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ" ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟಿಸಲಾಗಿದೆ.

ಇದರಲ್ಲಿರುವ ಮಾಹಿತಿಯ ಪ್ರಕಾರ, ‘‘ಕೇಂದ್ರ ತನಿಖಾ ದಳ (ಸಿಬಿಐ) ಪ್ರಧಾನ ಕಚೇರಿಯಲ್ಲಿ ನಡೆದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಾನುವಾರ ವಿಚಾರಣೆಗೆ ಒಳಪಡಿಸಿದ್ದನ್ನು ವಿರೋಧಿಸಿ ದೆಹಲಿ ಮತ್ತು ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಬೀದಿಗಿಳಿದು ಪ್ರತಿಭಟನೆ ನಡೆಸಿದರು’’ ಎಂದು ಬರೆಯಲಾಗಿದೆ.

ಇಂಡಿಯಾ ಟುಡೆ ಕೂಡ ಏಪ್ರಿಲ್ 16, 2023 ರಂದು ‘‘ಭಾರೀ ಭದ್ರತೆಯ ನಡುವೆ ವಿಚಾರಣೆಗಾಗಿ ಸಿಬಿಐ ಕಚೇರಿಯಲ್ಲಿ ಕೇಜ್ರಿವಾಲ್, ಪ್ರತಿಭಟನಾ ನಿರತ ಎಎಪಿ ಕಾರ್ಯಕರ್ತರ ಬಂಧನ’’ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟಿಸಿದೆ.

ದಿಲ್ಲಿ ತಕ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಏಪ್ರಿಲ್ 16, 2023 ರಂದು ‘‘ಪೊಲೀಸರು ಅಮಾನತುಲ್ಲಾ ಖಾನ್ ಅವರನ್ನು ಎಳೆದುಕೊಂಡು ಹೋದರು’’ ಎಂಬ ಶೀರ್ಷಿಕೆಯೊಂದಿಗೆ ಇದೇ ವೈರಲ್ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಸಿಬಿಐ ಸಮನ್ಸ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಪೊಲೀಸರು ಎಳೆದೊಯ್ದ ಏಪ್ರಿಲ್ 2023 ರ ವೀಡಿಯೊವನ್ನು ಇತ್ತೀಚಿನದ್ದು ಎಂದು ಸುಳ್ಳು ಹೇಳಿಕೆಯೊಂದಿಗೆ ವೈರಲ್ ಮಾಡಲಾಗುತ್ತಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Claim Review:ತನ್ನನ್ನು ಬಂಧಿಸಲು ಹೋದ ದೆಹಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದ ಶಾಸಕ ಅಮಾನತುಲ್ಲಾ ಖಾನ್ ಬಂಧನ.

Claimed By:Facebook User

Claim Reviewed By:NewsMeter

Claim Source:Social Media

Claim Fact Check:False

Fact:ಏಪ್ರಿಲ್ 2023 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಿಬಿಐ ಸಮನ್ಸ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಪೊಲೀಸರು ಬಂಧಿಸಿದ ವೀಡಿಯೊ ಇದಾಗಿದೆ.

ಈ ಲೇಖನವನ್ನು ಮೊದಲು newsmeter.in ಪ್ರಕಟಿಸಿದೆ. ʼಶಕ್ತಿ ಕಲೆಕ್ಟಿವ್‌ʼನ ಭಾಗವಾಗಿ ವಾರ್ತಾ ಭಾರತಿ ಪ್ರಕಟಿಸಿದೆ.

share
newsmeter.in
newsmeter.in
Next Story
X