ನಕಲಿ ದಾಖಲೆ ಪ್ರಕರಣ | ಅಲ್ ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥರ ಬಂಧನ

PC: PTI
ಹೊಸದಿಲ್ಲಿ, ಫೆ. 5: ನಕಲಿ ದಾಖಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ದಿಲ್ಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿಚಾರಣೆ ಆರಂಭಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಪುಕೋಟೆ ಸಮೀಪ ನಡೆದ ಸ್ಫೋಟದ ಬಳಿಕ ಖಾಸಗಿ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗಳಲ್ಲಿ ಅಕ್ರಮಗಳು ಹಾಗೂ ನಕಲಿ ದಾಖಲೆಗಳ ಬಳಕೆ ನಡೆದಿರುವ ಕುರಿತು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನೀಡಿದ ದೂರಿನ ಮೇರೆಗೆ ದಿಲ್ಲಿ ಪೊಲೀಸರು ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದರು.
ಬಂಧಿತ ಸಿದ್ದಿಕಿ ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Next Story





