ಪಂಜಾಬ್ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಐವರು ಕಾರ್ಮಿಕರು ಮೃತ್ಯು

Photo | timesofindia
ಚಂಡೀಗಢ: ಪಂಜಾಬ್ನ ಮುಕ್ತಸರ್ ಸಾಹಿಬ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀ ಮುಕ್ತಸರ್ ಸಾಹಿಬ್ನ ಸಿಂಘಾವಲಿ ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ತಿಳಿಸಿದ್ದಾರೆ.
ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ಈ ಕಾರ್ಖಾನೆ ತರ್ಸೆಮ್ ಸಿಂಗ್ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಕಾರ್ಖಾನೆಯಲ್ಲಿದ್ದ ಹೆಚ್ಚಿನ ಕಾರ್ಮಿಕರು ಉತ್ತರ ಪ್ರದೇಶ ಮತ್ತು ಬಿಹಾರ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.
Next Story





