ಮತ್ತೆ ಕುಸಿದ ಚಿನ್ನದ ದರ, ಸ್ಥಿರವಾದ ಬೆಳ್ಳಿ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಜಾಗತಿಕ ಆರ್ಥಿಕ ಮತ್ತು ಭೌಗೋಳಿಕ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರಸ್ತುತ ಅಸ್ಥಿರವಾಗಿವೆ.
ಜನವರಿಯಲ್ಲಿ ಅತ್ಯಧಿಕ ಮಟ್ಟಕ್ಕೆ ಏರಿದ ಚಿನ್ನ ನಂತರ ಫೆಬ್ರವರಿ, ಮಾರ್ಚ್ ಮತ್ತು ಎಪ್ರಿಲ್ ನಲ್ಲಿ ಕುಸಿತದ ಹಾದಿಯಲ್ಲಿದ್ದವು. ಕಳೆದ ವಾರದಲ್ಲಿ ಸತತ ಕುಸಿತ ಕಂಡ ಮೇಲೆ ಶನಿವಾರ ಬೆಲೆ ಸ್ಥಿರವಾಗಿತ್ತು. ಹಾಗಿದ್ದರೂ, ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರಸ್ತುತ ಅಸ್ಥಿರವಾಗಿವೆ. ಅಮೆರಿಕ ಮತ್ತು ಇರಾನ್ ಯುದ್ಧದ ಸುತ್ತಲಿನ ಭೌಗೋಳಿಕ ರಾಜಕೀಯ ಬೆಳವಣಿಗೆಗಳು ಮತ್ತು ಕಚ್ಚಾ ತೈಲ ಬೆಲೆಗಳ ಅನಿಶ್ಚಿತತೆ, ಹಣದುಬ್ಬರ ಮತ್ತು ದರ ಕಡಿತದ ಕುರಿತು ಅಮೆರಿಕದ ಫೆಡರಲ್ ರಿಸರ್ವ್ ನ ನಿಲುವು ಪ್ರಮುಖವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.
ಅಮೆರಿಕದ ಫೆಡರಲ್ ರಿಸರ್ವ್ ಬುಧವಾರ ತನ್ನ ನೀತಿ ನಿರ್ಧಾರವನ್ನು ಪ್ರಕಟಿಸುವಾಗ ಬಡ್ಡಿದರಗಳನ್ನು ಬದಲಾಗದೆ ಬಿಡುವ ನಿರೀಕ್ಷೆಯಿದೆ. ಹೂಡಿಕೆದಾರರು ಈ ವಾರ ಬ್ಯಾಂಕ್ ಆಫ್ ಜಪಾನ್, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ ಸೇರಿದಂತೆ ಇತರ ಪ್ರಮುಖ ಕೇಂದ್ರ ಬ್ಯಾಂಕ್ ಗಳಿಂದ ಬರುವ ಹಣಕಾಸು ನೀತಿ ಪ್ರಕರಣಗಳ ನಿರೀಕ್ಷೆಯಲ್ಲಿದ್ದಾರೆ.
ಇಂದಿನ ಚಿನ್ನದ ದರ ಹೇಗಿದೆ?
ಎಪ್ರಿಲ್ 28ರಂದು ಮಂಗಳವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 71 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,53,000 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 65 ರೂ. ಕಡಿಮೆಯಾಗಿ ಹತ್ತು ಗ್ರಾಂಗೆ 1,40,250 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 53 ರೂ. ಕುಸಿದು, ಹತ್ತು ಗ್ರಾಂಗೆ 1,14,750 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಎಪ್ರಿಲ್ 28ರಂದು ಮಂಗಳವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,300 (-71) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,025 (-65) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,475 (-53) ರೂ. ಬೆಲೆಗೆ ತಲುಪಿದೆ.
ಬೆಳ್ಳಿಯ ದರದಲ್ಲಿ ಸ್ಥಿರತೆ
ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಏಪ್ರಿಲ್ ಆರಂಭದಲ್ಲಿ 2,50,000 ರೂ. ಗೆ ಬಂದು ತಲುಪಿದ ನಂತರ, ಕಳೆದ ಗುರುವಾರ ಪ್ರತಿ ಗ್ರಾಂಗೆ 5 ರೂ. ಕುಸಿದ ಬೆಳ್ಳಿಯ ಬೆಲೆ ಮತ್ತೆ ಪ್ರತಿ ಕೆಜಿಗೆ 2,60,000 ಕ್ಕೆ ಬಂದು ನಿಂತಿದೆ. ಶುಕ್ರವಾರ, ಶನಿವಾರ, ಸೋಮವಾರ ಮತ್ತು ಇಂದು ಕೂಡ ಅದೇ ಬೆಲೆಯಲ್ಲಿ ಸ್ಥಿರವಾಗಿ ನಿಂತಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,315 (-71) ರೂ., 22 ಕ್ಯಾರೆಟ್ ಚಿನ್ನದ ದರ 14,040 (-65) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,300 (-71) ರೂ., 22 ಕ್ಯಾರೆಟ್ ಚಿನ್ನದ ದರ 14,025 (-65) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,305 (-71) ರೂ., 22 ಕ್ಯಾರೆಟ್ ಚಿನ್ನದ ದರ 14,030 (-65) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,382 (-142) ರೂ., 22 ಕ್ಯಾರೆಟ್ ಚಿನ್ನದ ದರ 14,100 (-130) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,300 (-71) ರೂ., 22 ಕ್ಯಾರೆಟ್ ಚಿನ್ನದ ದರ 14,025 (-65) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,300 (-71) ರೂ., 22 ಕ್ಯಾರೆಟ್ ಚಿನ್ನದ ದರ 14,025 (-65) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,315 (-71) ರೂ., 22 ಕ್ಯಾರೆಟ್ ಚಿನ್ನದ ದರ 14,040 (-65) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,315 (-71) ರೂ., 22 ಕ್ಯಾರೆಟ್ ಚಿನ್ನದ ದರ 14,040 (-65) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,315 (-71) ರೂ., 22 ಕ್ಯಾರೆಟ್ ಚಿನ್ನದ ದರ 14,040 (-65) ರೂ.






