ಮತ್ತೆ ಕುಸಿದ ಚಿನ್ನದ ಬೆಲೆ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಮಂಗಳವಾರ ತೀವ್ರ ಕುಸಿದಿರುವ ಚಿನ್ನದ ಬೆಲೆ ಆಗಸ್ಟ್ 5ರ ನಂತರದ ಅತಿ ಕನಿಷ್ಠ ಮಟ್ಟಕ್ಕೆ ಇಳಿದಿದೆ.
ಚಿನ್ನದ ಬೆಲೆ ಸೋಮವಾರ ಮತ್ತು ಮಂಗಳವಾರ ತೀವ್ರ ಕುಸಿದಿದೆ. ಅಮೆರಿಕದ ದತ್ತಾಂಶ ಪ್ರಕಟವಾಗುವ ಮುನ್ನ ಕುಸಿತದ ಹಾದಿಯಲ್ಲಿದೆ. ಆಗಸ್ಟ್ 5ರ ನಂತರದ ಅತಿ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಹೀಗಾಗಿ ಖರೀದಿದಾರರಿಗೆ ಸುವರ್ಣಾವಕಾಶವನ್ನು ನೀಡಿದೆ.
ಕುಸಿಯುತ್ತಿರುವ ಚಿನ್ನದ ಮಾರುಕಟ್ಟೆ
ಕಚ್ಚಾ ತೈಲ ಬೆಲೆಗಳ ಏರಿಕೆಯು ಹಣದುಬ್ಬರದ ಆತಂಕ ಹೆಚ್ಚಿಸಿದೆ. ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ದೀರ್ಘಕಾಲದವರೆಗೆ ಹೆಚ್ಚಿನ ಮಟ್ಟದಲ್ಲಿ ಉಳಿಸಬಹುದು ಎಂಬ ನಿರೀಕ್ಷೆಗಳು ಬಲಗೊಂಡಿರುವುದು ಇದಕ್ಕೆ ಕಾರಣವಾಗಿದೆ. ಬ್ಯಾಂಕ್ಗಳು ಹೆಚ್ಚಿನ ಬಡ್ಡಿದರ ನೀಡಿದಾಗ, ಹೂಡಿಕೆದಾರರು ಚಿನ್ನದ ಬದಲಿಗೆ ಬಾಂಡ್ಗಳು ಅಥವಾ ಬ್ಯಾಂಕ್ಗಳಲ್ಲಿ ಹಣ ಹೂಡಲು ಇಷ್ಟಪಡುತ್ತಾರೆ. ಇದರಿಂದಾಗಿ ಚಿನ್ನದ ಬೇಡಿಕೆ ಕಡಿಮೆಯಾಗಿ ಬೆಲೆ ಕುಸಿದಿದೆ.
ಮಾರುಕಟ್ಟೆ ತಜ್ಞರ ಪ್ರಕಾರ ಚಿನ್ನ-ಬೆಳ್ಳಿ ಬೆಲೆಗಳು ಸದ್ಯ ಇಳಿಕೆಯ ಹಾದಿಯಲ್ಲಿವೆ. ಆಗಸ್ಟ್ ಕೊನೆವಾರ ಮತ್ತು ಸೆಪ್ಟೆಂಬರ್ ಆರಂಭದಿಂದಲೇ ಕುಸಿತದ ಹಾದಿಯಲ್ಲಿದ್ದ ಚಿನ್ನ ನಂತರ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ, ಏರಿಳಿತದ ಹಾದಿಯಲ್ಲಿದ್ದ ಬೆಲೆ ಕಳೆದ ಒಂದು ವಾರದಿಂದ ಕುಸಿತದ ಹಾದಿಯಲ್ಲಿದೆ. ಶುಕ್ರವಾರ ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿಗೆ ಏರಿಕೆಯಾಗಿತ್ತು. ನಂತರ ಶನಿವಾರ ಸ್ವಲ್ಪ ಕುಸಿತದೊಂದಿಗೆ ಮಾರುಕಟ್ಟೆ ಆರಂಭವಾಗಿದೆ. ಆದರೆ ಇದೀಗ ಸೋಮವಾರ ಮತ್ತು ಮಂಗಳವಾರ ಶೇ 2ಕ್ಕೂ ಮೀರಿ ಕುಸಿತ ದಾಖಲಿಸಿದೆ.
ಚಿನ್ನದ ದರದಲ್ಲಿ ತೀವ್ರ ಇಳಿಕೆ
ಸೆಪ್ಟೆಂಬರ್ 29ರಂದು ಮಂಗಳವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 137 ರೂ. ಇಳಿಕೆಯಾಗಿದ್ದು, ಹತ್ತು ಗ್ರಾಂ ಬೆಲೆ 1,48,800 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 125 ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,36,400 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 103 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,11,600 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಸೆಪ್ಟೆಂಬರ್ 29ರಂದು ಮಂಗಳವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ತೀವ್ರ ಇಳಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,880 (-137) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,640 (-125) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,160 (-103) ರೂ. ಬೆಲೆಗೆ ಬಂದು ನಿಂತಿದೆ.
ಇಳಿದ ಬೆಳ್ಳಿಯ ದರ
ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ. ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ನಿಂತಿತ್ತು.
ಸೆಪ್ಟೆಂಬರ್ ನಂತರದ ವಾರಗಳಲ್ಲಿ ಸ್ವಲ್ಪ ಏರಿಳಿತ ಕಂಡರೂ ಕಳೆದ ವಾರದಲ್ಲಿ ಮತ್ತೆ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ಸ್ಥಿರವಾಗಿ ನಿಂತಿತ್ತು. ಇದೀಗ ಸೋಮವಾರ ಪ್ರತಿ ಗ್ರಾಂ ಬೆಳ್ಳಿ ದರ 5 ರೂ. ಇಳಿದು ಪ್ರತಿ ಕೆಜಿಗೆ 2,40,000 ರೂ.ಗೆ ಬಂದು ತಲುಪಿದ್ದು, ಜುಲೈ ನಂತರದ ಅತಿ ಕನಿಷ್ಠ ಬೆಲೆಗೆ ತಲುಪಿದೆ. ಮಂಗಳವಾರ ಅದೇ ಬೆಲೆಯಲ್ಲಿ ಸ್ಥಿರವಾಗಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 14,895 (-137) ರೂ., 22 ಕ್ಯಾರೆಟ್ ಚಿನ್ನದ ದರ 13,655 (-125) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 14,880 (-137) ರೂ., 22 ಕ್ಯಾರೆಟ್ ಚಿನ್ನದ ದರ 13,640 (-125) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 14,885 (-137) ರೂ., 22 ಕ್ಯಾರೆಟ್ ಚಿನ್ನದ ದರ 13,645 (-125) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 14,908 ರೂ., 22 ಕ್ಯಾರೆಟ್ ಚಿನ್ನದ ದರ 13,665 ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 14,880 (-137) ರೂ., 22 ಕ್ಯಾರೆಟ್ ಚಿನ್ನದ ದರ 13,640 (-125) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 14,880 (-137) ರೂ., 22 ಕ್ಯಾರೆಟ್ ಚಿನ್ನದ ದರ 13,640 (-125) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 14,895 (-137) ರೂ., 22 ಕ್ಯಾರೆಟ್ ಚಿನ್ನದ ದರ 13,655 (-125) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 14,895 (-137) ರೂ., 22 ಕ್ಯಾರೆಟ್ ಚಿನ್ನದ ದರ 13,655 (-125) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 14,895 (-137) ರೂ., 22 ಕ್ಯಾರೆಟ್ ಚಿನ್ನದ ದರ 13,655 (-125) ರೂ.
ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 14,880 (-137) ರೂ., 22 ಕ್ಯಾರೆಟ್ ಚಿನ್ನದ ದರ 13,640 (-125) ರೂ.






