ಅಲ್ಪ ಮಟ್ಟಿಗೆ ಕುಸಿದ ಚಿನ್ನದ ಬೆಲೆ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ | AI
ಈ ವಾರದಲ್ಲಿ ಬಹುತೇಕ ಸ್ಥಿರವಾಗಿದ್ದ ಚಿನ್ನದ ದರ ಇಂದು ಮತ್ತೆ ಅಲ್ಪಮಟ್ಟಿಗೆ ಕಡಿಮೆಯಾಗಿದೆ.
ಕಳೆದ ವಾರವಿಡೀ ಕುಸಿದಿದ್ದ ಚಿನ್ನದ ದರ ಶುಕ್ರವಾರ ಸ್ವಲ್ಪ ಏರಿಕೆ ಕಂಡಿತ್ತು. ಆನಂತರ ಶನಿವಾರ ಮತ್ತು ಸೋಮವಾರ ಮತ್ತೆ ಚಿನ್ನದ ದರ ಕಡಿಮೆಯಾಗಿತ್ತು. ಮಂಗಳವಾರ ಮತ್ತು ಬುಧವಾರ ಸ್ಥಿರವಾಗಿದ್ದ ಚಿನ್ನದ ಮೌಲ್ಯ ಇಂದು ಅಲ್ಪ ಮಟ್ಟಿಗೆ ಕಡಿಮೆಯಾಗಿದೆ. ಬೆಳ್ಳಿಯ ದರ ಕಳೆದೊಂದು ವಾರದಿಂದ ಸ್ಥಿರವಾಗಿದೆ.
ಜಾಗತಿಕ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಹೆಚ್ಚಿದ ಕಚ್ಚಾ ತೈಲ ಬೆಲೆಗಳು ಕೇಂದ್ರೀಯ ಬ್ಯಾಂಕ್ಗಳು ಬಡ್ಡಿದರ ಕಡಿತ ಮಾಡದಂತೆ ತಡೆಯುತ್ತಿವೆ. ಹೀಗಾಗಿ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆಗಳು ಅಸ್ಥಿರವಾಗಿವೆ. ಕದನವಿರಾಮದ ರಾಜತಾಂತ್ರಿಕ ಪ್ರಗತಿಯ ಬಗ್ಗೆ ಆಶಾವಾದ ಮತ್ತು ಮಾತುಕತೆ ಮುರಿದು ಬೀಳಬಹುದೆಂಬ ಕಳವಳಗಳ ನಡುವೆ ಮಾರುಕಟ್ಟೆಗಳ ಭಾವನೆಗಳು ಬದಲಾಗುತ್ತಿವೆ. ಜೊತೆಗೆ ಅಮೆರಿಕದ ಫೆಡರಲ್ ಬ್ಯಾಂಕ್ ರೂಪಿಸಬಹುದಾದ ಭವಿಷ್ಯದ ನೀತಿ ನಿರ್ದೇಶನದ ನಿರೀಕ್ಷೆಗಳು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ.
ತಜ್ಞರ ಪ್ರಕಾರ, ಬಡ್ಡಿದರಗಳ ಸುತ್ತಲಿನ ನಿರೀಕ್ಷೆಗಳನ್ನು ರೂಪಿಸುವಲ್ಲಿ ಅಮೆರಿಕದ ಫೆಡರಲ್ ರಿಸರ್ವ್ ಅಧಿಕಾರಿಗಳ ಹೇಳಿಕೆಗಳು ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ ಮತ್ತು ಚಿನ್ನದ ಮೇಲೆ ಅಲ್ಪಾವಧಿ ಪ್ರಭಾವ ಬೀರಬಹುದು. ದೀರ್ಘಾವಧಿಯಲ್ಲಿ ಚಿನ್ನದ ಓಟ ಬದಲಾಗುವ ಸಾಧ್ಯತೆಯಿಲ್ಲ. ಆದರೆ ಅಲ್ಪಾವಧಿಯಲ್ಲಿ ಭೌಗೋಳಿಕ ರಾಜಕೀಯದ ಅನಿಶ್ಚಿತತೆ ಚಿನ್ನದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.
ಕಡಿಮೆಯಾದ ಚಿನ್ನದ ದರ
ಜೂನ್ 4ರಂದು ಗುರುವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬುಧವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 11 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,56,110 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 10 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,43,100 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 9 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,17,080 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಜೂನ್ 4ರಂದು ಗುರುವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,611 (-11) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,310 (-10) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,708 (-9) ರೂ. ಬೆಲೆಗೆ ಬಂದು ತಲುಪಿದೆ.
ಸ್ಥಿರವಾದ ಬೆಳ್ಳಿಯ ಮೌಲ್ಯ
ಮಾರ್ಚ್ ಮತ್ತು ಎಪ್ರಿಲ್ನಲ್ಲಿ 2,55,000 ರೂ. ಸುತ್ತ ಮುತ್ತ ಬಂದು ನಿಂತಿದ್ದ ಬೆಳ್ಳಿಯ ಮೌಲ್ಯ ಮೇ ಆರಂಭದಲ್ಲಿ ಪ್ರತಿ ಕೆಜಿಗೆ 2,90,000 ಲಕ್ಷದವರೆಗೂ ಏರಿತ್ತು. ನಂತರ, ಬಹುತೇಕ ತಿಂಗಳಿಡೀ ಅದೇ ಬೆಲೆಯ ಆಸುಪಾಸಿನಲ್ಲಿ ಮುಂದುವರಿದಿತ್ತು. ಕಳೆದ ವಾರ ಬೆಳ್ಳಿಯ ಮೌಲ್ಯ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಈ ವಾರವೂ ಅದೇ ಬೆಲೆಗೆ ಸ್ಥಿರವಾಗಿ ನಿಂತಿದೆ.
ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,626 (-11) ರೂ., 22 ಕ್ಯಾರೆಟ್ ಚಿನ್ನದ ದರ 14,325 (-10) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,611 (-11) ರೂ., 22 ಕ್ಯಾರೆಟ್ ಚಿನ್ನದ ದರ 14,310 (-10) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,616 (-11) ರೂ., 22 ಕ್ಯಾರೆಟ್ ಚಿನ್ನದ ದರ 14,315 (-10) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,797 (-21) ರೂ., 22 ಕ್ಯಾರೆಟ್ ಚಿನ್ನದ ದರ 14,480 (-20) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,611 (-11) ರೂ., 22 ಕ್ಯಾರೆಟ್ ಚಿನ್ನದ ದರ 14,310 (-10) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,611 (-11) ರೂ., 22 ಕ್ಯಾರೆಟ್ ಚಿನ್ನದ ದರ 14,310 (-10) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,626 (-11) ರೂ., 22 ಕ್ಯಾರೆಟ್ ಚಿನ್ನದ ದರ 14,325 (-10) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,626 (-11) ರೂ., 22 ಕ್ಯಾರೆಟ್ ಚಿನ್ನದ ದರ 14,325 (-10) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,626 (-11) ರೂ., 22 ಕ್ಯಾರೆಟ್ ಚಿನ್ನದ ದರ 14,325 (-10) ರೂ.






