ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಹೊಸದಿಲ್ಲಿ: ಸತತ ಎರಡನೇ ವಾರವೂ ಚಿನ್ನದ ಬೆಲೆ ಏರಿಕೆಯ ಹಾದಿಯಲ್ಲಿದೆ. ಜೂನ್ ಮಾಸದ ಬೆಲೆಯ ಸಮಕ್ಕೆ ಬಂದಿದೆ. ಈ ವಾರದಲ್ಲಿ ಬುಧವಾರ ಸ್ವಲ್ಪ ಕುಸಿದಿದೆ. ಆದರೆ, ಗುರುವಾರ ಮತ್ತು ಶುಕ್ರವಾರ ಮತ್ತೆ ಬೆಲೆ ತೀವ್ರವಾಗಿ ಏರಿಕೆ ಕಂಡಿದೆ. ಹಿಂದಿನ ವಾರದ ಏರಿಕೆಯನ್ನು ಮೀರಿ ಈ ವಾರ ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದ್ದು, ಮೇ ಮಾಸದ ಚಿನ್ನದ ದರದ ಸಮಕ್ಕೆ ಬರುತ್ತಿದೆ.
ಚಿನ್ನದ ದರದಲ್ಲಿ ಭಾರೀ ಏರಿಕೆ
ಆಗಸ್ಟ್ 21ರಂದು ಶುಕ್ರವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರದ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 121 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,60,480 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 110 ರೂ. ಏರಿದ್ದು, ಹತ್ತು ಗ್ರಾಂಗೆ 1,47,100 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 90 ರೂ. ಹೆಚ್ಚಾಗಿ, ಹತ್ತು ಗ್ರಾಂಗೆ 1,20,360 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಆಗಸ್ಟ್ 21ರಂದು ಶುಕ್ರವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 16,048 (+121) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,710 (+110) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 12,036 (+90) ರೂ. ಬೆಲೆಗೆ ಬಂದು ನಿಂತಿದೆ.
ಏರಿದ ಬೆಳ್ಳಿಯ ದರ
ಮಂಗಳೂರಿನಲ್ಲಿ ಬೆಳ್ಳಿಯ ಬೆಲೆ ಮೇ 13ರಂದು ಪ್ರತಿ ಕೆಜಿಗೆ 3,30,000ಕ್ಕೆ ಏರಿದ ನಂತರ, ಬಹುತೇಕ ಮೇ ತಿಂಗಳಿಡೀ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಆದರೆ ಜೂನ್ನಲ್ಲಿ ಸ್ವಲ್ಪ ಏರಿಳಿತ ಕಂಡುಬಂದು ಪ್ರತಿ ಕೆಜಿಗೆ 2,40,000 ರೂ.ಗೆ ಬಂದು ನಿಂತಿತ್ತು. ಜುಲೈ ಆರಂಭದಲ್ಲಿ ಪ್ರತಿ ಕೆಜಿಗೆ 2,50,000 ರೂ.ವರೆಗೂ ಬೆಲೆ ಏರಿದ ನಂತರ ಇಳಿದಿತ್ತು.
ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000ರೂ.ಗೆ ಸ್ಥಿರವಾಗಿತ್ತು. ಆದರೆ, ಕಳೆದೆರಡು ವಾರದಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,50,000ರೂ. ಗೆ ಬೆಲೆ ಸ್ಥಿರವಾಗಿತ್ತು. ಬುಧವಾರ ಪ್ರತಿ ಗ್ರಾಂಗೆ 5ರೂ. ಇಳಿಕೆ ಕಂಡು ಮತ್ತೆ ಪ್ರತಿ ಕೆಜಿಗೆ 2,45,000 ರೂ.ಗೆ ತಲುಪಿತ್ತು. ಆದರೆ ಗುರುವಾರ ಭಾರೀ ಏರಿಕೆ ಕಂಡಿದೆ. ಪ್ರತಿ ಗ್ರಾಂಗೆ 10ರೂ. ಏರಿಕೆ ಕಂಡು ಪ್ರತಿ ಕೆಜಿಗೆ 2,55,000 ರೂ.ಗೆ ತಲುಪಿದೆ. ಇಂದು ಶುಕ್ರವಾರ ಅದೇ ಬೆಲೆಗೆ ಸ್ಥಿರವಾಗಿದೆ.
ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 16,063 (+121) ರೂ., 22 ಕ್ಯಾರೆಟ್ ಚಿನ್ನದ ದರ 14,725 (+110) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 16,048 (+121) ರೂ., 22 ಕ್ಯಾರೆಟ್ ಚಿನ್ನದ ದರ 14,710 (+110) ರೂ.
ಅಹ್ಮದಾಬಾದ್: 24 ಕ್ಯಾರೆಟ್ ಚಿನ್ನದ ದರ 16,053 (+121) ರೂ., 22 ಕ್ಯಾರೆಟ್ ಚಿನ್ನದ ದರ 14,715 (+110) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,928 (+1) ರೂ., 22 ಕ್ಯಾರೆಟ್ ಚಿನ್ನದ ದರ 14,601 (+1) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 16,048 (+121) ರೂ., 22 ಕ್ಯಾರೆಟ್ ಚಿನ್ನದ ದರ 14,710 (+110) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 16,048 (+121) ರೂ., 22 ಕ್ಯಾರೆಟ್ ಚಿನ್ನದ ದರ 14,710 (+110) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 16,063 (+121) ರೂ., 22 ಕ್ಯಾರೆಟ್ ಚಿನ್ನದ ದರ 14,725 (+110) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 16,063 (+121) ರೂ., 22 ಕ್ಯಾರೆಟ್ ಚಿನ್ನದ ದರ 14,725 (+110) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 16,063 (+121) ರೂ., 22 ಕ್ಯಾರೆಟ್ ಚಿನ್ನದ ದರ 14,725 (+110) ರೂ.
ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 16,048 (+121) ರೂ., 22 ಕ್ಯಾರೆಟ್ ಚಿನ್ನದ ದರ 14,710 (+110) ರೂ.






