ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಸದ್ಯದ ಮುನ್ಸೂಚನೆಯ ಪ್ರಕಾರ ಈ ವರ್ಷವಿಡೀ ಚಿನ್ನದ ಮೌಲ್ಯ ಹೆಚ್ಚು ಏರಿಳಿತವಾಗದೆ ಸ್ಥಿರವಾಗಿ ಇರುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ವಾರವಿಡೀ ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆ ವಾರಾಂತ್ಯದಲ್ಲಿ ದಿಢೀರ್ ಏರಿಕೆ ಕಂಡಿತ್ತು. ಈ ಸೋಮವಾರವೂ ಚಿನ್ನ-ಬೆಳ್ಳಿ ಮೌಲ್ಯ ಏರಿಕೆಯಾಗಿತ್ತು. ಆದರೆ ಮಂಗಳವಾರ ಮತ್ತು ಬುಧವಾರ ಸ್ವಲ್ಪ ಮಟ್ಟಿಗೆ ಕುಸಿದಿದೆ. ಗುರುವಾರ ಸ್ಥಿರವಾಗಿದ್ದ ಚಿನ್ನದ ಬೆಲೆ ಇದೀಗ ಶುಕ್ರವಾರ ತೀವ್ರವಾಗಿ ಕುಸಿದಿದೆ. ಹೀಗಾಗಿ ಚಿನ್ನ ಪ್ರಿಯರಲ್ಲಿ ನಿರಾಳತೆ ಆವರಿಸಿತ್ತು. ಇದೀಗ ಶನಿವಾರ ಚಿನ್ನದ ಮೌಲ್ಯ ಅಲ್ಪಮಟ್ಟಿಗೆ ಏರಿಕೆಯಾಗಿದೆ.
ಇರಾನ್- ಅಮೆರಿಕ ಸಂಘರ್ಷದ ನಂತರ ಹಣದುಬ್ಬರ ಕಳವಳದ ಹಿನ್ನೆಲೆಯಲ್ಲಿ ಕೇಂದ್ರ ಬ್ಯಾಂಕ್ ಗಳು ಸಾಲ ವೆಚ್ಚವನ್ನು ಹೆಚ್ಚಿಸಲು ನೀತಿ ಬಿಗಿಗೊಳಿಸುವ ನಿರೀಕ್ಷೆಯಿದೆ. ಚಿನ್ನವು ಬಡ್ಡಿ ಆದಾಯ ನೀಡುವುದಿಲ್ಲವಾದ ಕಾರಣ ಹೆಚ್ಚಿನ ಬಡ್ಡಿದರಗಳು ಚಿನ್ನದ ಆಕರ್ಷಣೆ ಕಡಿಮೆ ಮಾಡುತ್ತದೆ. ಹೀಗಾಗಿ ತಜ್ಞರು ಹೇಳಿರುವ ಪ್ರಕಾರ ಡಿಸೆಂಬರ್ ವೇಳೆಗೆ ಚಿನ್ನವು ಔನ್ಸ್ ಗೆ 4900 ಡಾಲರ್ ತಲುಪುವ ನಿರೀಕ್ಷೆಯಿದೆ. ಯುದ್ಧದ ಹಿಂದಿನ ಮುನ್ಸೂಚನೆ 5400 ಡಾಲರ್ ತಲುಪುವ ನಿರೀಕ್ಷೆ ಇಟ್ಟಿತ್ತು. ಹೀಗಾಗಿ ಈ ವರ್ಷವಿಡೀ ಚಿನ್ನದ ಮೌಲ್ಯ ಹೆಚ್ಚು ಏರಿಳಿತವಾಗದೆ ಸ್ಥಿರವಾಗಿ ಇರುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸ್ವಲ್ಪ ಏರಿದ ಚಿನ್ನದ ದರ
ಜೂನ್ 20ರಂದು ಶನಿವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 22 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,46,080 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 20 ರೂ. ಏರಿಕೆಯಾಗಿ, ಹತ್ತು ಗ್ರಾಂಗೆ 1,33,900 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 17 ರೂ. ಏರಿಕೆಯಾಗಿ, ಹತ್ತು ಗ್ರಾಂಗೆ 1,09,560 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಜೂನ್ 20ರಂದು ಶನಿವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,608 (+22) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,390 (+20) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,956 (+17) ರೂ. ಬೆಲೆಗೆ ಬಂದು ತಲುಪಿದೆ.
ಸ್ಥಿರವಾದ ಬೆಳ್ಳಿಯ ಮೌಲ್ಯ
ಮಾರ್ಚ್ ಮತ್ತು ಎಪ್ರಿಲ್ ನಲ್ಲಿ 2,55,000 ರೂ. ಸುತ್ತ ಮುತ್ತ ಬಂದು ನಿಂತಿದ್ದ ಬೆಳ್ಳಿಯ ಮೌಲ್ಯ ಮೇ ಆರಂಭದಲ್ಲಿ ಪ್ರತಿ ಕೆಜಿಗೆ 2,90,000 ಲಕ್ಷ ರೂ.ವರೆಗೂ ಏರಿತ್ತು. ನಂತರ, ಬಹುತೇಕ ಮೇ ತಿಂಗಳಿಡೀ ಬೆಳ್ಳಿಯ ಮೌಲ್ಯ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಜೂನ್ ಆರಂಭದಲ್ಲೂ ಅದೇ ಬೆಲೆಗೆ ಸ್ಥಿರವಾಗಿ ನಿಂತಿತ್ತು. ಆದರೆ ಕಳೆದ ವಾರದ ಆರಂಭದಲ್ಲಿ ಕುಸಿಯುತ್ತಾ ಬಂದಿದ್ದ ಬೆಳ್ಳಿಯ ಮೌಲ್ಯ ಬುಧವಾರ ಪ್ರತಿ ಗ್ರಾಂಗೆ 10 ರೂ. ಕಡಿಮೆಯಾಗಿ ಪ್ರತಿ ಕೆಜಿಗೆ 2,50,000 ರೂ.ಗೆ ಬಂದು ನಿಂತಿತ್ತು. ಈ ವಾರದ ಆರಂಭದಲ್ಲೇ ಪ್ರತಿ ಗ್ರಾಂಗೆ 5 ರೂ. ಏರಿಕೆಯಾಗಿ ಪ್ರತಿ ಕೆಜಿಗೆ 2,65,000 ರೂ.ಗೆ ಬಂದು ನಿಂತಿತ್ತು. ಮಂಗಳವಾರ ಮತ್ತು ಬುಧವಾರ ಇದೇ ಬೆಲೆಯಲ್ಲಿ ಸ್ಥಿರವಾಗಿ ನಿಂತಿದೆ. ಗುರುವಾರ ಸ್ವಲ್ಪ ಕುಸಿದಿದ್ದ ಚಿನ್ನದ ದರ ಇದೀಗ ಶುಕ್ರವಾರ ದಿಢೀರ್ ಪ್ರತಿ ಗ್ರಾಂಗೆ 10 ರೂ. ಕುಸಿದ ಕಾರಣ ಮತ್ತೆ ಪ್ರತಿ ಕೆಜಿಗೆ 2,50,000 ರೂ.ಗೆ ಬಂದು ನಿಂತಿದೆ. ಇದೀಗ ಶನಿವಾರ ಅದೇ ದರದಲ್ಲಿ ಸ್ಥಿರವಾಗಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 14,623 (+22) ರೂ., 22 ಕ್ಯಾರೆಟ್ ಚಿನ್ನದ ದರ 13,405 (+20) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 14,608 (+22) ರೂ., 22 ಕ್ಯಾರೆಟ್ ಚಿನ್ನದ ದರ 13,390 (+20) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 14,613 (+22) ರೂ., 22 ಕ್ಯಾರೆಟ್ ಚಿನ್ನದ ದರ 13,395 (+20) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 14,837 (+33) ರೂ., 22 ಕ್ಯಾರೆಟ್ ಚಿನ್ನದ ದರ 13,600 (+30) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 14,608 (+22) ರೂ., 22 ಕ್ಯಾರೆಟ್ ಚಿನ್ನದ ದರ 13,390 (+20) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 14,608 (+22) ರೂ., 22 ಕ್ಯಾರೆಟ್ ಚಿನ್ನದ ದರ 13,390 (+20) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 14,623 (+22) ರೂ., 22 ಕ್ಯಾರೆಟ್ ಚಿನ್ನದ ದರ 13,405 (+20) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 14,623 (+22) ರೂ., 22 ಕ್ಯಾರೆಟ್ ಚಿನ್ನದ ದರ 13,405 (+20) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 14,623 (+22) ರೂ., 22 ಕ್ಯಾರೆಟ್ ಚಿನ್ನದ ದರ 13,405 (+20) ರೂ.






