ಮತ್ತೆ ಕುಸಿದ ಚಿನ್ನದ ದರ, ಸ್ಥಿರವಾದ ಬೆಳ್ಳಿ

ಸಾಂದರ್ಭಿಕ ಚಿತ್ರ (AI)
ಭೌಗೋಳಿಕ-ರಾಜಕೀಯ ಅನಿಶ್ಚಿತತೆ ಮತ್ತು ಹಾರ್ಮುಝ್ ಜಲಸಂಧಿ ಸುತ್ತಲಿನ ಕಳವಳಗಳು ಚಿನ್ನ-ಬೆಳ್ಳಿ ಮೌಲ್ಯದಲ್ಲಿ ಏರಿಳಿತಕ್ಕೆ ಕಾರಣವಾಗುತ್ತಿವೆ.
ಅಮೆರಿಕ ಮತ್ತು ಇರಾನ್ ಯುದ್ಧದ ಅಂತ್ಯದ ಭರವಸೆ ಬಲಗೊಳ್ಳುತ್ತಿದ್ದಂತೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇತ್ತೀಚೆಗಿನ ವಹಿವಾಟು ಅವಧಿಯಲ್ಲಿ ಚಿನ್ನದ ಬೆಲೆಗಳು ಮತ್ತೆ ಏರಿಕೆಯಾಗಿದ್ದವು. ಆದರೆ ಹಾರ್ಮುಜ್ ಜಲಸಂಧಿ ಸುತ್ತಲಿನ ಕಳವಳಗಳು ಚಿನ್ನ-ಬೆಳ್ಳಿ ಮೌಲ್ಯದಲ್ಲಿ ಏರಿಳಿತಕ್ಕೆ ಕಾರಣವಾಗುತ್ತಿವೆ. ತೈಲ ಬೆಲೆ ಏರಿಕೆ ಮತ್ತು ಹಣದುಬ್ಬರದ ಜೊತೆಗೆ ಭೌಗೋಳಿಕ-ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ಕಾರಣ ಚಿನ್ನದ ಬೆಲೆಯೇರಿಕೆ ಸೀಮಿತವಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಮತ್ತೆ ಕುಸಿದ ಚಿನ್ನದ ದರ
ಮೇ 9ರಂದು ಶನಿವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 33 ರೂ. ಕುಸಿತ ಕಂಡು ಹತ್ತು ಗ್ರಾಂ ಬೆಲೆ 1,52,350 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 30 ರೂ. ಕಡಿಮೆಯಾಗಿ ಹತ್ತು ಗ್ರಾಂಗೆ 1,39,650 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 25 ರೂ. ಕಡಿಮೆಯಾಗಿ ಹತ್ತು ಗ್ರಾಂಗೆ 1,14,260 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಮೇ 9ರಂದು ಶನಿವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,235 (-33) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,965 (-30) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,426 (-25) ರೂ. ಬೆಲೆಗೆ ತಲುಪಿದೆ.
ಬೆಳ್ಳಿಯ ದರದಲ್ಲಿ ಸ್ಥಿರತೆ
ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಏಪ್ರಿಲ್ ಆರಂಭದಲ್ಲಿ 2,55,000 ರೂ. ಗೆ ಬಂದು ತಲುಪಿದ ನಂತರ, ಬಹುತೇಕ ತಿಂಗಳಿಡೀ ಅದೇ ಬೆಲೆಯಲ್ಲಿ ಮುಂದುವರಿದಿತ್ತು. ಕಳೆದ ಶನಿವಾರ ಪ್ರತಿ ಗ್ರಾಂಗೆ 10 ರೂ. ಏರಿದ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,65,000 ರೂ.ಗೆ ತಲುಪಿತ್ತು. ಮಂಗಳವಾರ ಮತ್ತೆ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ದರ ಪ್ರತಿ ಕೆಜಿಗೆ 2,55,000 ರೂ.ಗೆ ಬಂದು ತಲುಪಿತ್ತು. ಬುಧವಾರ ಪ್ರತಿ ಗ್ರಾಂಗೆ 10 ರೂ. ಏರಿದ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,65,000 ರೂ.ಗೆ ಬಂದು ತಲುಪಿತ್ತು. ಗುರುವಾರ ಪ್ರತಿ ಗ್ರಾಂಗೆ 5 ರೂ. ಏರಿದ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,70,000 ರೂ.ಗೆ ಬಂದು ತಲುಪಿದೆ. ಶುಕ್ರವಾರ ಪ್ರತಿ ಗ್ರಾಂಗೆ 5 ರೂ. ಏರಿದ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,75,000 ರೂ.ಗೆ ಬಂದು ತಲುಪಿದೆ. ಇದೀಗ ಶನಿವಾರ ಅದೇ ಬೆಲೆಯಲ್ಲಿ ಸ್ಥಿರವಾಗಿ ನಿಂತಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,250 (-38) ರೂ., 22 ಕ್ಯಾರೆಟ್ ಚಿನ್ನದ ದರ 13,980 (-30) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,235 (-33) ರೂ., 22 ಕ್ಯಾರೆಟ್ ಚಿನ್ನದ ದರ 13,965 (-30) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,240 (-38) ರೂ., 22 ಕ್ಯಾರೆಟ್ ಚಿನ್ನದ ದರ 13,970 (-30) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,437 ರೂ., 22 ಕ್ಯಾರೆಟ್ ಚಿನ್ನದ ದರ 14,150 ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,235 (-33) ರೂ., 22 ಕ್ಯಾರೆಟ್ ಚಿನ್ನದ ದರ 13,965 (-30) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,235 (-33) ರೂ., 22 ಕ್ಯಾರೆಟ್ ಚಿನ್ನದ ದರ 13,965 (-30) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,250 (-38) ರೂ., 22 ಕ್ಯಾರೆಟ್ ಚಿನ್ನದ ದರ 13,980 (-30) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,250 (-38) ರೂ., 22 ಕ್ಯಾರೆಟ್ ಚಿನ್ನದ ದರ 13,980 (-30) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,250 (-38) ರೂ., 22 ಕ್ಯಾರೆಟ್ ಚಿನ್ನದ ದರ 13,980 (-30) ರೂ.






