ಕುಸಿದ ಚಿನ್ನದ ಬೆಲೆ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಸೋಮವಾರ ಮತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿರುವುದು ಗ್ರಾಹಕರ ಮೊಗದಲ್ಲಿ ಮಂದಹಾಸ ತಂದಿದೆ.
ಜನವರಿಯಲ್ಲಿ ಅತ್ಯಂತ ದಾಖಲೆ ಮಟ್ಟಕ್ಕೆ ಏರಿದ ನಂತರ ಚಿನ್ನದ ಬೆಲೆಗಳು ಕುಸಿತದ ಹಾದಿಯಲ್ಲಿವೆ. ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಚಿನ್ನದ ಬೆಲೆಗಳು ಸುಮಾರು ಶೇ 12ರಷ್ಟು ಕುಸಿತದ ನಂತರ ನಷ್ಟ ವಿಸ್ತರಿಸಿ ಎಪ್ರಿಲ್ನಲ್ಲಿ ಶೇ 1ರಷ್ಟು ಕುಸಿದಿವೆ. ಮೇ ತಿಂಗಳಲ್ಲೂ ಕುಸಿತದ ಹಾದಿಯಲ್ಲಿರುವುದು ಸ್ಪಷ್ಟವಾಗಿದೆ.
ಭಾರತೀಯ ಬಹು ಸರಕು ವಿನಿಯಮ ಕೇಂದ್ರ (ಎಂಸಿಎಕ್ಸ್) ದಲ್ಲಿ ಮಂಗಳವಾರದ ವಹಿವಾಟು ಕುಸಿತದೊಂದಿಗೆ ಆರಂಭವಾಯಿತು. ನಿರಂತರ ಹಣದುಬ್ಬರದ ಕಳವಳಗಳು ಅಮೆರಿಕದ ಹಣಕಾಸು ನೀತಿಯ ಸುತ್ತಲ ನಿರೀಕ್ಷೆಗಳನ್ನು ಮಸುಕಾಗಿಸಿವೆ. ಹೀಗಾಗಿ ಹೂಡಿಕೆದಾರರು ಜಾಗೃತರಾಗಿದ್ದು, ಇರಾನ್ ಮತ್ತು ಅಮೆರಿಕದ ನಡುವಿನ ಮಾತುಕತೆಗಳತ್ತ ಗಮನ ಕೇಂದ್ರೀಕರಿಸಿದ್ದಾರೆ. ಕಚ್ಚಾ ತೈಲಗಳ ಬೆಲೆಗಳು ಮತ್ತು ಬಡ್ಡಿದರಗಳು ದೀರ್ಘಕಾಲದವರೆಗೆ ಹೆಚ್ಚಾಗಬಹುದು ಎಂಬ ನಿರೀಕ್ಷೆಗಳು ಬಲವಾಗಿದೆ. ಈ ಮುನ್ನೋಟವು ಡಾಲರ್ ಮೇಲೆ ಇಳುವರಿಯನ್ನು ಬೆಂಬಲಿಸಿದ್ದು, ಅಮೂಲ್ಯ ಲೋಹಗಳ ಬೆಲೆಯನ್ನು ಕುಸಿಯುವಂತೆ ಮಾಡಿವೆ.
ಇಂದಿನ ಚಿನ್ನದ ದರ ಹೇಗಿದೆ?
ಮೇ 5ರಂದು ಮಂಗಳವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 44ರೂ. ಕುಸಿತ ಕಂಡು ಹತ್ತು ಗ್ರಾಂ ಬೆಲೆ 1,4,9180 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 40 ರೂ. ಕಡಿಮೆಯಾಗಿ ಹತ್ತು ಗ್ರಾಂಗೆ 1,36,750 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 33 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,11,890 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಮೇ 5ರಂದು ಮಂಗಳವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,918 (-44) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,675 (-40) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,189 (-33) ರೂ. ಬೆಲೆಗೆ ತಲುಪಿದೆ.
ಬೆಳ್ಳಿಯ ದರದಲ್ಲೂ ಕುಸಿತ
ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಎಪ್ರಿಲ್ ಆರಂಭದಲ್ಲಿ 2,55,000 ರೂ. ಗೆ ಬಂದು ತಲುಪಿದ ನಂತರ, ಬಹುತೇಕ ತಿಂಗಳಿಡೀ ಅದೇ ಬೆಲೆಯಲ್ಲಿ ಮುಂದುವರಿದಿತ್ತು. ಕಳೆದ ಶನಿವಾರ ಪ್ರತಿ ಗ್ರಾಂಗೆ 10 ರೂ. ಏರಿದ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,65,000 ರೂ.ಗೆ ತಲುಪಿತ್ತು. ಇದೀಗ ಮಂಗಳವಾರ ಮತ್ತೆ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ದರ ಪ್ರತಿ ಕೆಜಿಗೆ 2,55,000 ರೂ.ಗೆ ಬಂದು ತಲುಪಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 14,923 (-54) ರೂ., 22 ಕ್ಯಾರೆಟ್ ಚಿನ್ನದ ದರ 13,690 (-40) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 14,918 (-44) ರೂ., 22 ಕ್ಯಾರೆಟ್ ಚಿನ್ನದ ದರ 13,675 (-40) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 14,923 (-44) ರೂ., 22 ಕ್ಯಾರೆಟ್ ಚಿನ್ನದ ದರ 13,680 (-40) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,077 (-196) ರೂ., 22 ಕ್ಯಾರೆಟ್ ಚಿನ್ನದ ದರ 13,820 (-180) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 14,918 (-44) ರೂ., 22 ಕ್ಯಾರೆಟ್ ಚಿನ್ನದ ದರ 13,675 (-40) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 14,918 (-44) ರೂ., 22 ಕ್ಯಾರೆಟ್ ಚಿನ್ನದ ದರ 13,675 (-40) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 14,933 (-44) ರೂ., 22 ಕ್ಯಾರೆಟ್ ಚಿನ್ನದ ದರ 13,690 (-40) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 14,923 (-54) ರೂ., 22 ಕ್ಯಾರೆಟ್ ಚಿನ್ನದ ದರ 13,690 (-40) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 14,923 (-54) ರೂ., 22 ಕ್ಯಾರೆಟ್ ಚಿನ್ನದ ದರ 13,690 (-40) ರೂ.






