ವರ್ಷದ ಕನಿಷ್ಠ ಮಟ್ಟಕ್ಕೆ ಇಳಿದ ಚಿನ್ನ-ಬೆಳ್ಳಿ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI Generated)
ಅಮೆರಿಕದ ಹಣದುಬ್ಬರದ ದತ್ತಾಂಶವು ನಿರೀಕ್ಷೆಗಿಂತ ಹೆಚ್ಚಾಗಿರುವುದು ಕಳೆದ ಮೂರು ದಿನಗಳಲ್ಲಿ ಚಿನ್ನದ ದರದಲ್ಲಿ ಕುಸಿತಕ್ಕೆ ಕಾರಣವಾಗಿದೆ.
ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ್ದ ಚಿನ್ನ-ಬೆಳ್ಳಿಯ ದರ ನಂತರ ಜಾಗತಿಕ ಭೌಗೋಳಿಕ- ರಾಜಕೀಯ ಉದ್ವಿಗ್ನತೆಗಳ ನಡುವೆ ಕುಸಿತದ ಹಾದಿಯಲ್ಲಿದೆ. ಜೂನ್ನಲ್ಲಿ ಕನಿಷ್ಠ ದರ ದಾಖಲಿಸಿದ ನಂತರ ಜುಲೈನಿಂದ ಸೆಪ್ಟೆಂಬರ್ ನಡುವೆ ಹೆಚ್ಚು ಕುಸಿತ ಕಾಣದೆ ಸ್ಥಿರವಾಗಿತ್ತು. ಅಕ್ಟೋಬರ್ ತಿಂಗಳಿಡೀ ಕುಸಿತದ ಜೊತೆಗೆ ಸಾಗಿದ್ದ ಚಿನ್ನ-ಬೆಳ್ಳಿಯ ದರದಲ್ಲಿ, ಅಕ್ಟೋಬರ್ ಕೊನೆಯ ವಾರದಲ್ಲಿ ಸ್ವಲ್ಪ ಸ್ಥಿರತೆ ಕಂಡುಬಂದಿತ್ತು. ಅಕ್ಟೋಬರ್ 31ರಂದು ತೀವ್ರ ಕುಸಿತ ದಾಖಲಿಸಿದ ನಂತರ ನವೆಂಬರ್ನಿಂದ ಮತ್ತೆ ಏರಿಕೆಯತ್ತ ಸಾಗಿತ್ತು. ಇದೀಗ ಮಂಗಳವಾರ ನವೆಂಬರ್ 10ರಿಂದ ಮತ್ತೆ ಕುಸಿತದತ್ತ ಸಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.
ಶುಕ್ರವಾರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಭಾರಿ ಪ್ರಮಾಣದಲ್ಲಿ ಕುಸಿದಿವೆ. ಇಂದು ಶೇ 3.5 ನಷ್ಟದಲ್ಲೇ ಚಿನ್ನದ ಬೆಲೆ ಮುಂದುವರಿದಿವೆ. ಈ ವರ್ಷದ ಆರಂಭದ ನಂತರದ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ಹೀಗೆ ಬೆಲೆ ಕಡಿಮೆಯಾದಾಗ ಹೂಡಿಕೆದಾರರು ಚಿನ್ನವನ್ನು ಕೊಳ್ಳಲು ಮುಂದಾಗುತ್ತಾರೆ. ಹೀಗಾಗಿ ಬೆಲೆಯಲ್ಲಿ ಅಲ್ಪ ಏರಿಕೆ ಉಂಟಾಗಬಹುದು.
ಅಮೆರಿಕದ ಆರ್ಥಿಕ ಬೆಳವಣಿಗೆಗಳು ಚಿನ್ನದ ಬೆಲೆ ಕುಸಿತಕ್ಕೆ ಕಾರಣವಾಗುತ್ತಿವೆ. ಅಮೆರಿಕದಲ್ಲಿ ಹಣದುಬ್ಬರ ಹೆಚ್ಚಾಗಿರುವುದರಿಂದ ಅಲ್ಲಿನ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಮತ್ತಷ್ಟು ಏರಿಸುವ ಸಾಧ್ಯತೆಯಿದೆ. ಬಡ್ಡಿದರಗಳು ಹೆಚ್ಚಾದಾಗ ಅಮೆರಿಕದ ಡಾಲರ್ ಮೌಲ್ಯ ಬಲಗೊಂಡಾಗ ಹೂಡಿಕೆದಾರರು ಚಿನ್ನದ ಬದಲಿಗೆ ಬ್ಯಾಂಕ್ ಠೇವಣಿ ಅಥವಾ ಸರಕಾರಿ ಬಾಂಡ್ಗಳಲ್ಲಿ ಹಣ ಹೂಡಲು ಹೆಚ್ಚು ಆಸಕ್ತಿ ತೋರುತ್ತಾರೆ. ಇದರಿಂದ ಚಿನ್ನದ ಬೇಡಿಕೆ ಕಡಿಮೆಯಾಗಿ ಬೆಲೆ ಕುಸಿಯುತ್ತದೆ.
ಚಿನ್ನದ ದರದಲ್ಲಿ ಮತ್ತೆ ಭಾರಿ ಕುಸಿತ
ನವೆಂಬರ್ 13ರಂದು ಶುಕ್ರವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 131ರೂ. ಇಳಿಕೆಯಾಗಿದ್ದು, ಹತ್ತು ಗ್ರಾಂ ಬೆಲೆ 1,38,490ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 120ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,26,950 ರೂ.ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 98 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,03,870 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ನವೆಂಬರ್ 13ರಂದು ಶುಕ್ರವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 13,849 (-131) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 12,695 (-120) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,387 (-98) ರೂ. ಬೆಲೆಗೆ ಬಂದು ನಿಂತಿದೆ.
ಇಳಿದ ಬೆಳ್ಳಿಯ ದರ
ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿಯ ಬೆಲೆ ನಂತರ ಕುಸಿತದ ಹಾದಿಯಲ್ಲಿತ್ತು. ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000ರೂ. ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000ರೂ.ಗೆ ಬಂದು ನಿಂತಿತ್ತು.
ಸೆಪ್ಟೆಂಬರ್ ನಂತರದ ವಾರಗಳಲ್ಲಿ ಸ್ವಲ್ಪ ಏರಿಳಿತ ಕಂಡರೂ ಮತ್ತೆ ದರ ಕುಸಿದು ಪ್ರತಿ ಕೆಜಿಗೆ 2,45,000ರೂ.ಗೆ ಬಂದು ಸ್ಥಿರವಾಗಿತ್ತು. ನಂತರ ಅಕ್ಟೋಬರ್ ತಿಂಗಳಲ್ಲಿ ಕುಸಿದ ಬೆಳ್ಳಿಯ ದರ ಅಕ್ಟೋಬರ್ 15ರಂದು ಪ್ರತಿ ಗ್ರಾಂಗೆ 5 ರೂ ಇಳಿದು ಮತ್ತೆ ಪ್ರತಿ ಕೆಜಿಗೆ 2,30,000ರೂ.ಗೆ ತಲುಪಿ ಸ್ಥಿರವಾಗಿತ್ತು.
ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಬೆಳ್ಳಿಯ ದರ ಪ್ರತಿ ಕೆಜಿಗೆ 2,00,000ರೂ.ಗೆ ತಲುಪಿತ್ತು. ಅಂದಿನಿಂದ ಅದೇ ಬೆಲೆಗೆ ಸ್ಥಿರವಾಗಿತ್ತು. ನಂತರ ನವೆಂಬರ್ ಅರಂಭದಲ್ಲಿ ಪ್ರತಿ ಗ್ರಾಂಗೆ 10ರೂ ಏರಿಕೆಯಾಗಿರುವ ಬೆಳ್ಳಿಯ ದರ ಪ್ರತಿ ಕೆಜಿಗೆ 2,10,000ರೂ.ಗೆ ತಲುಪಿತ್ತು. ನವೆಂಬರ್ 6ರಂದು ಪ್ರತಿ ಗ್ರಾಂಗೆ 5ರೂ ಇಳಿದಿರುವ ಬೆಳ್ಳಿಯ ದರ ಪ್ರತಿ ಕೆಜಿಗೆ 2,05,000 ರೂ.ಗೆ ತಲುಪಿದೆ. ಅಂದಿನಿಂದ ಅದೇ ಬೆಲೆಗೆ ಸ್ಥಿರವಾಗಿತ್ತು. ಬುಧವಾರ ನವೆಂಬರ್ 11ರಂದು ಮತ್ತೆ ಪ್ರತಿ ಗ್ರಾಂಗೆ 5ರೂ ಇಳಿದಿರುವ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 2,00,000ರೂ.ಗೆ ತಲುಪಿತ್ತು. ಇಂದು ಮತ್ತೆ ಕುಸಿದಿರುವ ಬೆಳ್ಳಿಯ ದರ ಪ್ರತಿ ಕೆಜಿಗೆ 1,99,900ಕ್ಕೆ ಇಳಿದಿದೆ.
ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 13,864 (-131) ರೂ., 22 ಕ್ಯಾರೆಟ್ ಚಿನ್ನದ ದರ 12,710 (-125) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 13,849 (-131) ರೂ., 22 ಕ್ಯಾರೆಟ್ ಚಿನ್ನದ ದರ 12,695 (-120) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 13,854 (-131) ರೂ., 22 ಕ್ಯಾರೆಟ್ ಚಿನ್ನದ ದರ 12,700 (-125) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 13,849 (-131) ರೂ., 22 ಕ್ಯಾರೆಟ್ ಚಿನ್ನದ ದರ 12,695 (-120) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 13,849 (-131) ರೂ., 22 ಕ್ಯಾರೆಟ್ ಚಿನ್ನದ ದರ 12,695 (-120) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 13,849 (-131) ರೂ., 22 ಕ್ಯಾರೆಟ್ ಚಿನ್ನದ ದರ 12,695 (-120) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 13,864 (-131) ರೂ., 22 ಕ್ಯಾರೆಟ್ ಚಿನ್ನದ ದರ 12,710 (-125) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 13,864 (-131) ರೂ., 22 ಕ್ಯಾರೆಟ್ ಚಿನ್ನದ ದರ 12,710 (-125) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 13,864 (-131) ರೂ., 22 ಕ್ಯಾರೆಟ್ ಚಿನ್ನದ ದರ 12,710 (-125) ರೂ.
ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 13,849 (-131) ರೂ., 22 ಕ್ಯಾರೆಟ್ ಚಿನ್ನದ ದರ 12,695 (-120) ರೂ.






