ಚಿನ್ನದ ದರದಲ್ಲಿ ಏರಿಳಿತ ನಿರೀಕ್ಷೆ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಆಮದಿನ ಮೇಲೆ ಸರ್ಕಾರದ ಹೊಸ ನಿರ್ಬಂಧಗಳು, ಕಚ್ಚಾ ತೈಲ ಬೆಲೆಗಳ ಏರಿಳಿತಗಳು ಮತ್ತು ಅಮೆರಿಕ- ಇರಾನ್ ಸಂಘರ್ಷಕ್ಕೆ ಸಂಬಂಧಿಸಿದ ನಿರಂತರ ಅನಿಶ್ಚಿತತೆಗೆ ಮಾರುಕಟ್ಟೆಗಳು ಪ್ರತಿಕ್ರಿಯಿಸುವ ನಿರೀಕ್ಷೆಯಿದೆ.
ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿದಿರುವುದು, ಭಾರತವು ಬೆಳ್ಳಿ ಮತ್ತು ಚಿನ್ನದ ಆಮದಿನ ಮೇಲೆ ನಿರ್ಬಂಧ ಹೇರಿರುವುದು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರಿಳಿತವಾಗುವ ನಿರೀಕ್ಷೆಯಿದೆ. ಆಮದಿನ ಮೇಲೆ ಸರ್ಕಾರದ ಹೊಸ ನಿರ್ಬಂಧಗಳು, ಕಚ್ಚಾ ತೈಲ ಬೆಲೆಗಳ ಏರಿಳಿತಗಳು ಮತ್ತು ಅಮೆರಿಕ- ಇರಾನ್ ಸಂಘರ್ಷಕ್ಕೆ ಸಂಬಂಧಿಸಿದ ನಿರಂತರ ಅನಿಶ್ಚಿತತೆಗೆ ಮಾರುಕಟ್ಟೆಗಳು ಪ್ರತಿಕ್ರಿಯಿಸುವ ನಿರೀಕ್ಷೆಯಿದೆ.
ಮತ್ತೆ ಕುಸಿದ ಚಿನ್ನದ ದರ
ಮೇ 18ರಂದು ಸೋಮವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶನಿವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 71 ರೂ. ಕುಸಿತ ಕಂಡು ಹತ್ತು ಗ್ರಾಂ ಬೆಲೆ 1,56,220 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 65 ರೂ. ಕುಸಿತ ಕಂಡು ಹತ್ತು ಗ್ರಾಂಗೆ 1,43,200 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 53 ರೂ. ಕುಸಿತವಾಗಿ ಹತ್ತು ಗ್ರಾಂಗೆ 1,17,170 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಮೇ 18ರಂದು ಸೋಮವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ ಕಂಡಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,622 (-71) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,320 (-65) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,717 (-53) ರೂ. ಬೆಲೆಗೆ ತಲುಪಿದೆ.
ಇಂದಿನ ಬೆಳ್ಳಿಯ ದರವೆಷ್ಟು?
ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಏಪ್ರಿಲ್ ಆರಂಭದಲ್ಲಿ 2,55,000 ರೂ. ಗೆ ಬಂದು ತಲುಪಿದ ನಂತರ, ಬಹುತೇಕ ತಿಂಗಳಿಡೀ ಅದೇ ಬೆಲೆಯಲ್ಲಿ ಮುಂದುವರಿದಿತ್ತು. ಕಳೆದ ವಾರದಿಂದ ಬೆಳ್ಳಿಯ ಬೆಲೆ ಏರುತ್ತಲೇ ಇದೆ. ಶುಕ್ರವಾರ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 3,05,000 ರೂ.ಗೆ ಬಂದು ತಲುಪಿತ್ತು. ಆದರೆ ಶನಿವಾರ ಪ್ರತಿ ಗ್ರಾಂಗೆ 10 ರೂ. ಕಡಿಮೆಯಾಗಿ ಪ್ರತಿ ಕೆಜಿ ಬೆಳ್ಳಿಯ ಬೆಲೆ 2,80,000 ರೂ.ಗೆ ಬಂದು ನಿಂತಿದೆ. ಇದೀಗ ಸೋಮವಾರ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,79,900 ರೂ.ಗೆ ಕುಸಿದಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,637 (-71) ರೂ., 22 ಕ್ಯಾರೆಟ್ ಚಿನ್ನದ ದರ 14,335 (-65) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,622 (-71) ರೂ., 22 ಕ್ಯಾರೆಟ್ ಚಿನ್ನದ ದರ 14,320 (-65) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,627 (-71) ರೂ., 22 ಕ್ಯಾರೆಟ್ ಚಿನ್ನದ ದರ 14,325 (-65) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 16,091 ರೂ., 22 ಕ್ಯಾರೆಟ್ ಚಿನ್ನದ ದರ 14,750 ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,622 (-71) ರೂ., 22 ಕ್ಯಾರೆಟ್ ಚಿನ್ನದ ದರ 14,320 (-65) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 16,091 (+398) ರೂ., 22 ಕ್ಯಾರೆಟ್ ಚಿನ್ನದ ದರ 14,320 (-65) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,637 (-71) ರೂ., 22 ಕ್ಯಾರೆಟ್ ಚಿನ್ನದ ದರ 14,335 (-65) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,637 (-71) ರೂ., 22 ಕ್ಯಾರೆಟ್ ಚಿನ್ನದ ದರ 14,335 (-65) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,637 (-71) ರೂ., 22 ಕ್ಯಾರೆಟ್ ಚಿನ್ನದ ದರ 14,335 (-65) ರೂ.






