ಹಣದುಬ್ಬರದ ಆತಂಕಕ್ಕೆ ನಲುಗಿದ ಚಿನ್ನದ ಮಾರುಕಟ್ಟೆ; ಅಂತಾರಾಷ್ಟ್ರೀಯ ಮಟ್ಟದಲ್ಲೇ ಬಂಗಾರದ ಬೆಲೆ ಕುಸಿತ!

ಸಾಂದರ್ಭಿಕ ಚಿತ್ರ (AI)
ದೇಶದ ಮಟ್ಟಿಗೆ ಹೇಳಬೇಕೆಂದರೆ ಚಿನ್ನ ಮತ್ತು ಬೆಳ್ಳಿ ದರಗಳು ದುರ್ಬಲವಾಗಿ ಆರಂಭವಾಗಿವೆ.
ಪಶ್ಚಿಮ ಏಷ್ಯಾದ ಭೌಗೋಳಿಕ-ರಾಜಕೀಯ ಬೆಳವಣಿಗೆಗಳು, ಕಚ್ಚಾ ತೈಲ ಮಾರುಕಟ್ಟೆಗಳ ಏರಿಳಿತಗಳು ಮತ್ತು ಈ ವಾರ ಬಿಡುಗಡೆಯಾಗುವ ಅಮೆರಿಕದ ಆರ್ಥಿಕ ದತ್ತಾಂಶಗಳ ನಿರೀಕ್ಷೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಮೌಲ್ಯಗಳು ತೂಗುಯ್ಯಾಲೆಯಲ್ಲಿವೆ.
ಹೂಡಿಕೆದಾರರು ಚೀನಾ ಮತ್ತು ಅಮೆರಿಕ ಎರಡರ ವ್ಯಾಪಾರ ಮತ್ತು ಹಣದುಬ್ಬರ ಅಂಕಿಅಂಶಗಳತ್ತ ಗಮನ ನೆಟ್ಟಿದ್ದಾರೆ. ಜೊತೆಗೆ ಯುರೋಪ್ ನ ಸೆಂಟ್ರಲ್ ಬ್ಯಾಂಕ್ ನ ನೀತಿ ನಿರ್ಧಾರಗಳನ್ನು ಗಮನಿಸುತ್ತಿದ್ದಾರೆ.
ದೇಶದ ಮಟ್ಟಿಗೆ ಹೇಳಬೇಕೆಂದರೆ ಚಿನ್ನ ಮತ್ತು ಬೆಳ್ಳಿ ದರಗಳು ದುರ್ಬಲವಾಗಿ ಆರಂಭವಾಗಿವೆ. ಕಳೆದೆರಡು ವಾರಗಳಿಂದ ಚಿನ್ನ ಸತತ ಕುಸಿತದ ಹಾದಿಯಲ್ಲಿದೆ. ಮೇ ತಿಂಗಳಲ್ಲಿ ಸ್ಥಿರವಾಗಿದ್ದ ಬೆಳ್ಳಿಯ ಬೆಲೆಯೂ ಜೂನ್ ಆರಂಭದಲ್ಲಿ ಕುಸಿಯಲು ಆರಂಭವಾಗಿದೆ. ಇಂದೂ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತದೊಂದಿಗೆ ಮಾರುಕಟ್ಟೆ ಆರಂಭವಾಗಿದೆ.
ಮತ್ತೆ ಕುಸಿದ ಚಿನ್ನದ ದರ
ಜೂನ್ 7ರಂದು ಸೋಮವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶನಿವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 104 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,51,690 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 95 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,39,050 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 78 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,13,770 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಜೂನ್ 7ರಂದು ಸೋಮವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ ಕಂಡಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,169 (-104) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,905 (-95) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,377 (-78) ರೂ. ಬೆಲೆಗೆ ಬಂದು ತಲುಪಿದೆ.
ತೀವ್ರ ಕುಸಿದ ಬೆಳ್ಳಿಯ ದರ
ಮಾರ್ಚ್ ಮತ್ತು ಎಪ್ರಿಲ್ ನಲ್ಲಿ 2,55,000 ರೂ. ಸುತ್ತ ಮುತ್ತ ಬಂದು ನಿಂತಿದ್ದ ಬೆಳ್ಳಿಯ ದರ ಮೇ ಆರಂಭದಲ್ಲಿ ಪ್ರತಿ ಕೆಜಿಗೆ 2,90,000 ಲಕ್ಷದವರೆಗೂ ಏರಿತ್ತು. ನಂತರ, ಬಹುತೇಕ ತಿಂಗಳಿಡೀ ಬೆಳ್ಳಿಯ ಮೌಲ್ಯ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಕಳೆದ ವಾರವೂ ಅದೇ ಬೆಲೆಗೆ ಸ್ಥಿರವಾಗಿ ನಿಂತಿತ್ತು. ಆದರೆ, ಶುಕ್ರವಾರ ಬೆಳ್ಳಿಯ ಮೌಲ್ಯ ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿ ಪ್ರತಿ ಕೆಜಿಗೆ 2,75,000 ರೂ.ಗೆ ಬಂದು ತಲುಪಿತು. ಶನಿವಾರ ಬೆಳ್ಳಿಯ ಮೌಲ್ಯ ಪ್ರತಿ ಗ್ರಾಂಗೆ 10 ರೂ. ಕಡಿಮೆಯಾಗಿ ಪ್ರತಿ ಕೆಜಿಗೆ 2,65,000 ರೂ.ಗೆ ಬಂದು ನಿಂತಿತ್ತು. ಇದೀಗ ಸೋಮವಾರ ಮತ್ತೆ ಕುಸಿದಿರುವ ಬೆಳ್ಳಿಯ ದರ ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿ ಪ್ರತಿ ಕೆಜಿಗೆ 2,60,000 ರೂ.ಗೆ ಬಂದು ತಲುಪಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,184 (-104) ರೂ., 22 ಕ್ಯಾರೆಟ್ ಚಿನ್ನದ ದರ 13,920 (-95) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,169 (-104) ರೂ., 22 ಕ್ಯಾರೆಟ್ ಚಿನ್ನದ ದರ 13,905 (-95) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,174 (-104) ರೂ., 22 ಕ್ಯಾರೆಟ್ ಚಿನ್ನದ ದರ 13,910 (-95) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,349 (-142) ರೂ., 22 ಕ್ಯಾರೆಟ್ ಚಿನ್ನದ ದರ 14,070 (-130) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,169 (-104) ರೂ., 22 ಕ್ಯಾರೆಟ್ ಚಿನ್ನದ ದರ 13,905 (-95) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,169 (-104) ರೂ., 22 ಕ್ಯಾರೆಟ್ ಚಿನ್ನದ ದರ 13,905 (-95) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,184 (-104) ರೂ., 22 ಕ್ಯಾರೆಟ್ ಚಿನ್ನದ ದರ 13,920 (-95) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,184 (-104) ರೂ., 22 ಕ್ಯಾರೆಟ್ ಚಿನ್ನದ ದರ 13,920 (-95) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,184 (-104) ರೂ., 22 ಕ್ಯಾರೆಟ್ ಚಿನ್ನದ ದರ 13,920 (-95) ರೂ.






