ಸ್ಥಿರವಾದ ಚಿನ್ನ-ಬೆಳ್ಳಿಯ ಬೆಲೆ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಅಮೆರಿಕ-ಇರಾನ್ ನಡುವೆ ಸಮರದ ಅನಿಶ್ಚಿತ ಪರಿಸ್ಥಿತಿ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಿದೆ.
ಜನವರಿಯಲ್ಲಿ ಅತ್ಯಧಿಕ ಮಟ್ಟಕ್ಕೆ ಏರಿದ ಚಿನ್ನ ನಂತರ ಫೆಬ್ರವರಿ, ಮಾರ್ಚ್ ಮತ್ತು ಎಪ್ರಿಲ್ ನಲ್ಲಿ ಕುಸಿತದ ಹಾದಿಯಲ್ಲಿದ್ದವು. ಈ ವಾರದಲ್ಲಿ ಸತತ ಕುಸಿತ ಕಂಡ ಮೇಲೆ ಶನಿವಾರ ಬೆಲೆ ಸ್ಥಿರವಾಗಿದೆ. ಆದರೆ ಚೆನ್ನೈನಂತಹ ನಗರಗಳಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಏರಿಕೆ ಕಂಡಿವೆ. ಅಮೆರಿಕ-ಇರಾನ್ ನಡುವೆ ಸಮರದ ಅನಿಶ್ಚಿತ ಪರಿಸ್ಥಿತಿ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಿದೆ.
ಇಂದಿನ ಚಿನ್ನದ ದರ ಹೇಗಿದೆ?
ಎಪ್ರಿಲ್ 24ರಂದು ಶುಕ್ರವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ 60 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,52,950 ರೂ. ಗೆ ಬಂದು ನಿಂತಿತ್ತು. ನಂತರ ಶುಕ್ರವಾರ ಸಂಜೆ ಬೆಲೆ ಏರಿಕೆ ಕಂಡಿತ್ತು. ಇದೀಗ ಶನಿವಾರವೂ ಅದೇ ಬೆಲೆಯಲ್ಲಿ ಪ್ರತಿ ಹತ್ತು ಗ್ರಾಂಗೆ 1,54,040 ಗೆ ಸ್ಥಿರವಾಗಿ ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಹತ್ತು ಗ್ರಾಂಗೆ 1,41,200 ರೂ. ಮತ್ತು 18 ಕ್ಯಾರೆಟ್ ಚಿನ್ನವು ಪ್ರತಿ ಹತ್ತು ಗ್ರಾಂಗೆ 1,15,530 ರೂ. ನಲ್ಲಿ ಸ್ಥಿರವಾಗಿ ನಿಂತಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಎಪ್ರಿಲ್ 25ರಂದು ಶನಿವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಸ್ಥಿರವಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,404 ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,120 ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,553 ರೂ. ಬೆಲೆಗೆ ತಲುಪಿದೆ.
ಬೆಳ್ಳಿಯ ದರದಲ್ಲಿ ಸ್ಥಿರತೆ
ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಎಪ್ರಿಲ್ ಆರಂಭದಲ್ಲಿ 2,50,000 ರೂ. ಗೆ ಬಂದು ತಲುಪಿದ ನಂತರ, ಈ ಸೋಮವಾರ ಪ್ರತಿ ಕೆಜಿಗೆ 2,75,000 ದರದಲ್ಲಿ ಸ್ಥಿರವಾಗಿತ್ತು. ಮಂಗಳವಾರ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ಬೆಲೆ ಮತ್ತೆ ಪ್ರತಿ ಕೆಜಿಗೆ 2,65,000 ಕ್ಕೆ ಬಂದು ತಲುಪಿದೆ. ಗುರುವಾರ ಪ್ರತಿ ಗ್ರಾಂಗೆ 5 ರೂ. ಕುಸಿದ ಬೆಳ್ಳಿಯ ಬೆಲೆ ಮತ್ತೆ ಪ್ರತಿ ಕೆಜಿಗೆ 2,60,000 ಕ್ಕೆ ಬಂದು ನಿಂತಿದೆ. ಇದೀಗ ಶುಕ್ರವಾರ ಮತ್ತು ಶನಿವಾರವೂ ಅದೇ ಬೆಲೆಯಲ್ಲಿ ಸ್ಥಿರವಾಗಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,419 ರೂ., 22 ಕ್ಯಾರೆಟ್ ಚಿನ್ನದ ದರ 14,135 ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,404 ರೂ., 22 ಕ್ಯಾರೆಟ್ ಚಿನ್ನದ ದರ 14,120 ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,409 ರೂ., 22 ಕ್ಯಾರೆಟ್ ಚಿನ್ನದ ದರ 14,125 ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,491 (+109) ರೂ., 22 ಕ್ಯಾರೆಟ್ ಚಿನ್ನದ ದರ 14,200 (+100) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,404 ರೂ., 22 ಕ್ಯಾರೆಟ್ ಚಿನ್ನದ ದರ 14,120 ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,404 ರೂ., 22 ಕ್ಯಾರೆಟ್ ಚಿನ್ನದ ದರ 14,120 ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,419 ರೂ., 22 ಕ್ಯಾರೆಟ್ ಚಿನ್ನದ ದರ 14,135 ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,419 ರೂ., 22 ಕ್ಯಾರೆಟ್ ಚಿನ್ನದ ದರ 14,135 ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,419 ರೂ., 22 ಕ್ಯಾರೆಟ್ ಚಿನ್ನದ ದರ 14,135 ರೂ.






