ಮುಂಬೈನಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ

ಮುಂಬೈ, ಅ. 18: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ನಟ ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ಯಾವುದೇ ಗುಂಡೇಟು ತಗುಲಿಲ್ಲ ಎಂದು ಪೊಲೀಸರು ರವಿವಾರ ಸ್ಪಷ್ಟಪಡಿಸಿದ್ದಾರೆ
ಮುಂಬೈನ ಜುಹು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಡಿಸಿಪಿ ಮೋಹಿತ್ ಗಾರ್ಗ್ ತಿಳಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಗುಂಡಿನ ದಾಳಿ ನಡೆದ ಸಂದರ್ಭವೇನು, ಘಟನೆಯ ಹಿಂದೆ ಯಾರಿದ್ದಾರೆ ಹಾಗೂ ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ಇನ್ನೂ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.
ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
Next Story




