Haryana | ಪೊಲೀಸರೊಂದಿಗೆ ಗುಂಡಿನ ಚಕಮಕಿ: ಇಬ್ಬರು ಶಂಕಿತ ಗೋ ಕಳ್ಳ ಸಾಗಣೆದಾರರು ಮೃತ್ಯು

ಸಾಂದರ್ಭಿಕ ಚಿತ್ರ
ಚಂಡಿಗಢ: ಹರ್ಯಾಣದ ನೂಹ್ ಜಿಲ್ಲೆಯಲ್ಲಿ ರವಿವಾರ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಶಂಕಿತ ದನ ಕಳ್ಳ ಸಾಗಣೆದಾರರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರನ್ನು ಸಾಬಿರ್ ಮತ್ತು ಗಬ್ಬರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಇನ್ನೋರ್ವ ಶಂಕಿತ ದನ ಕಳ್ಳ ಸಾಗಾಟಗಾರ ತಾಹಿರ್ ಹಾಗೂ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ತಾಹಿರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಫಿರೋಜ್ಪುರ್ ಝಿರ್ಕಾ ಭಾಗದ ಕ್ರೈಮ್ ಇನ್ವೆಸ್ಟಿಗೇಶನ್ ಏಜೆನ್ಸಿ ತಂಡಕ್ಕೆ ರವಿವಾರ ಬೆಳಗ್ಗೆ ದನಗಳ ಕಳ್ಳ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ತಂಡ ವಾಹನವನ್ನು ತಡೆಯಲು ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಶಂಕಿತ ದನ ಕಳ್ಳಸಾಗಣೆಗಾರರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಪೊಲೀಸರು ಪ್ರತಿ ದಾಳಿ ನಡೆಸಿದರು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು ಎಂದು ನೂಹ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.




