ಐಎಂಡಿಯಿಂದ ಈಶಾನ್ಯ, ದಕ್ಷಿಣ ಭಾರತದಲ್ಲಿ ಪ್ರವಾಹದ ಮುನ್ನೆಚ್ಚರಿಕೆ

ಸಾಂದರ್ಭಿಕ ಚಿತ್ರ | PTI
ಹೊಸದಿಲ್ಲಿ: ಎರಡು ವಾರಗಳ ವಿರಾಮದ ಬಳಿಕ ಮುಂಗಾರು ಮಳೆ ವೇಗ ಪಡೆದುಕೊಳ್ಳುತ್ತಿದ್ದು, ಈಶಾನ್ಯ ಹಾಗೂ ದಕ್ಷಿಣ ಭಾರತದಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ನೆಚ್ಚರಿಕೆ ನೀಡಿದೆ.
ಆಗ್ನೇಯ ಮುಂಗಾರಿನ ಎರಡನೇ ಹಂತ ಮತ್ತೆ ಸಕ್ರಿಯಗೊಳ್ಳುತ್ತಿದ್ದು, ಇದರಿಂದ ಕರ್ನಾಟಕ, ಕೇರಳ ಹಾಗೂ ಮಾಹೆಯಲ್ಲಿ ಭಾರೀ ಮಳೆ ಬೀಳಲಿದೆ. ಅಲ್ಲದೆ, ಈಶಾನ್ಯ ರಾಜ್ಯಗಳಲ್ಲಿ ಸಾದಾರಣದಿಂದ ಗಂಭೀರದ ವರೆಗಿನ ಪ್ರವಾಹ ಉಂಟಾಗುವ ಅಪಾಯ ಇದೆ. ಈ ಪ್ರದೇಶದಲ್ಲಿ 200 ಎಂ.ಎಂ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಕೊಂಕಣ, ಗೋವಾ, ಕರಾವಳಿ ಕರ್ನಾಟಕ ಹಾಗೂ ಕೇರಳದಲ್ಲಿ ರೆಡ್ ಅಲರ್ಟ್ ಹಾಗೂ ಈಶಾನ್ಯದಲ್ಲಿ ಆರೆಂಜ್ ಅಲರ್ಟ್ ಅನ್ನು ಐಎಂಡಿ ಘೋಷಿಸಿದೆ. ಮುಂದಿನ ಎರಡು ದಿನಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಮ್ ಹಾಗೂ ಅಸ್ಸಾಂನ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಅಪಾಯದ ವರೆಗಿನ ಪ್ರವಾಹ ಉಂಟಾಗಲಿದೆ.
Next Story





