Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರಗೊಂಡ 'ಇಂಡಿಯಾ'-ಭಾರತ್ ಚರ್ಚೆ

ತೀವ್ರಗೊಂಡ 'ಇಂಡಿಯಾ'-ಭಾರತ್ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ19 July 2023 7:55 AM IST
share
ತೀವ್ರಗೊಂಡ ಇಂಡಿಯಾ-ಭಾರತ್ ಚರ್ಚೆ

ಹೊಸದಿಲ್ಲಿ: ಯುಪಿಎ ಒಕ್ಕೂಟವನ್ನು 'ಇಂಡಿಯಾ' (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ರಾಷ್ಟ್ರ ಮತ್ತು ಜನತೆ ಹಾಗೂ ಪ್ರದೇಶಗಳ ಆಕಾಂಕ್ಷೆಯನ್ನು ಒಳಗೊಂಡ ನವಭಾರತ ಎಂದು ವಿಶ್ಲೇಷಿಸಿದ್ದಾರೆ. ಏತನ್ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟ್ಟರ್ ವಿವರಗಳಿಂದ ಇಂಡಿಯಾ ಎಂಬ ಪದವನ್ನು ಕಿತ್ತು ಹಾಕಿ ಭಾರತ್ ಎಂದು ಹಾಕಿಕೊಂಡಿದ್ದಾರೆ.

ಇಂಡಿಯಾ ಎಂದರೆ ಭಾರತ ಅಲ್ಲ ಎಂದು ಪ್ರತಿಪಾದಿಸಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

Ok.But first change your Twitter bio-data, where you have written Chief Minister of Assam, India.Also, tell your boss to change the names of Stand Up India, Start Up India, Make in India etc. we know these have failed, but INDIA will win. https://t.co/cZVQjLMoyc pic.twitter.com/AYl89lzBuR

— Gurdeep Singh Sappal (@gurdeepsappal) July 18, 2023

"ಯುಪಿಎ ಇಂಡಿಯಾ ಆದ ತಕ್ಷಣ ಬಿಜೆಪಿ ಎಂದರೆ ಭಾರತ ಎಂದಾಗಿದೆ. ನಮ್ಮ ನಾಗರೀಕತೆಯ ಸಂಘರ್ಷ ಭಾರತ ಹಾಗೂ ಇಂಡಿಯಾ ನಡುವೆ ಆಗಿದೆ. ಬ್ರಿಟಿಷರು ನಮ್ಮ ದೇಶವನ್ನು ಇಂಡಿಯಾ ಎಂದು ಹೆಸರಿಸಿದರು. ಈ ಸಾಮ್ರಾಜ್ಯಶಾಹಿ ಸಿದ್ಧಾಂತಗಳಿಂದ ನಾವು ಮುಕ್ತರಾಗಲು ಪ್ರಯತ್ನಿಸಬೇಕಾಗಿದೆ. ನಮ್ಮ ಪೂರ್ವಜರು ಭಾರತಕ್ಕಾಗಿ ಹೋರಾಡಿದರು ಮತ್ತು ನಾವು ಭಾರತಕ್ಕಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭಾರತಕ್ಕಾಗಿ" ಎಂದು ಹಿಮಾಂತ ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಮತ್ತು ಭಾರತ ನಡುವಿನ ವಿಶ್ಲೇಷಣೆಯನ್ನು ಕಾಂಗ್ರೆಸ್ ಮುಖಂಡರು ತಳ್ಳಿಹಾಕಿದ್ದು, ಇಂಡಿಯಾ ಎಂದರೆ ಭಾರತ ಹಾಗೂ ಒಕ್ಕೂಟ ಎನ್ನುವುದನ್ನು ನಮ್ಮ ಸಂವಿಧಾನ ಒತ್ತಿ ಹೇಳಿದೆ" ಎಂದು ಪ್ರತಿಪಾದಿಸಿದ್ದಾರೆ.

ಇಂಡಿಯಾ ಶಬ್ದವನ್ನು ಹಿಮಾಂತ ಬಿಸ್ವ ಟೀಕಿಸಿದ ಬಳಿಕ ಕಾಂಗ್ರೆಸ್ ಮುಖಂಡರು ನಿಮ್ಮ ಟ್ವಿಟ್ಟರ್ ವಿವರದಲ್ಲಿ ಇಂಡಿಯಾ ಎಂದು ಏಕೆ ಇದೆ ಹಾಗೂ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಎನ್ನುವ ಶಬ್ದಗಳು ಈಗ ಬದಲಾಗುತ್ತವೆಯೇ ಎಂದು ಅಣಕಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಮಾಂತ, "ಚೀಫ್ ಮಿನಿಸ್ಟರ್ ಆಫ್ ಅಸ್ಸಾಂ, ಭಾರತ್" ಎಂದು ತಮ್ಮ ಟ್ವಿಟ್ಟರ್ ಖಾತೆಯನ್ನು ಬದಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X