ಕೋಲ್ಕತ್ತಾ | ಜಾದವ್ಪುರ ವಿವಿ ಆವರಣದ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ | timesofindia
ಕೋಲ್ಕತ್ತಾ: ಜಾದವ್ಪುರ ವಿಶ್ವವಿದ್ಯಾಲಯದ ಮೂರನೆಯ ವರ್ಷದ ಇಂಗ್ಲಿಷ್ ವಿಭಾಗದ ವಿದ್ಯಾರ್ಥಿನಿಯೊಬ್ಬಳು ಗುರುವಾರ ರಾತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿನ ಕೆರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿನಿಯನ್ನು ಇನ್ನಿತರ ವಿದ್ಯಾರ್ಥಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ರಕ್ಷಿಸಿ, ಕೆಪಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಈ ಘಟನೆಯಿಂದ ಜಾದವ್ಪುರ ವಿಶ್ವವಿದ್ಯಾಲಯ ಆವರಣದ ಭದ್ರತಾ ವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ.
Next Story




