ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ಹಾರಾಟ ಪತ್ತೆ ; ನಿಷ್ಕ್ರೀಯಗೊಳಿಸಿದ ಸೇನೆ
ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ ಬಳಿಕ ನಡೆದ ಘಟನೆ

PHOTO | ANI
ಶ್ರೀನಗರ: ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಕೆಲವೇ ಕ್ಷಣಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ವಲಯದಲ್ಲಿ ಡ್ರೋನ್ ಚಟುವಟಿಕೆ ವರದಿಯಾಗಿದೆ.
ಸೇನಾ ಮೂಲಗಳ ಪ್ರಕಾರ, ಡ್ರೋನ್ಗಳು ಭಾರತೀಯ ಪ್ರದೇಶವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಭಾರತೀಯ ಭದ್ರತಾ ಪಡೆಗಳು ಡ್ರೋನ್ಗಳನ್ನು ತಕ್ಷಣವೇ ನಿಷ್ಕ್ರೀಯಗೊಳಿಸಿದೆ ಎಂದು ಸೇನಾ ಮೂಲಗಳು ಹೇಳಿರುವುದಾಗಿ ANI ವರದಿ ಮಾಡಿದೆ.
Next Story





